ಮಂಗಳೂರು: ಸಾರ್ವಜನಿಕರು ದನ ಕಳವು ಪ್ರಕರಣದ ಬಗ್ಗೆ ಪೋಲಿಸರಿಗೆ ಮಾಹಿತಿ ನೀಡಿ ಸಹಕರಿಸಬೇಕು, ದನ ಕಳವು ಮತ್ತು ಸಾಗಟದ ಪ್ರಕರಣಗಳ ಪತ್ತೆ ಮತ್ತು ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೆ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಕಾನೂನನ್ನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ಕೈಕೊಳ್ಳಲಾಗುವುದು.
ದನ ಕಳವು ಪ್ರಕರಣಗಳನ್ನು ಹತ್ತಿಕ್ಕಲು ಗಸ್ತು ಕಾರ್ಯಚರಣೆ ಮತ್ತು ಪೋಲಿಸ್ ಕಾವಲನ್ನು ಬಿಗಿಗೊಳಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಶಿಸ್ತು ವಿಭಾಗದ ಎಡಿಜಿಪಿ ಎಮ್. ಎನ್. ರೆಡ್ಡಿ ತಿಳಿಸಿದರು.
ಎ.ಡಿ.ಜಿ.ಪಿಯಾಗಿ ಅಧಿಕಾರ ಸ್ವಿಕರಿಸಿದ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಪೋಲಿಸ್ ಅಧಿಕಾರಿಗಳೊಂದಿಗೆ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತಾಡಿ ರಾಜ್ಯದ್ಯಾಂತ 18,000 ಪೋಲಿಸ್ ಹುದ್ದೆಗಳು ಖಾಲಿ ಇದ್ದು, ಅದನ್ನು ನಿವಾರಿಸಲು ರಾಜ್ಯಸರಕಾರದಿಂದ ಪ್ರಯತ್ನ ನಡೆಯುತ್ತದೆ. ಕಳೆದ ತಿಂಗಳ ಬಜೆಟ್ ನಲ್ಲಿ ಪೋಲಿಸ್ ಸಿಬ್ಬಂದಿಗಳ ನೇಮಕಾತಿಗೆ ಕ್ರಮಕೈಗೊಳ್ಳಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಪೋಲಿಸ್ ಸಿಬ್ಬಂದಿಗಳ ಕೊರತೆ ನೀಗುವ ಸಾಧ್ಯತೆ ಇದೆ.
ಮಂಗಳೂರಿನ ಪೋಲಿಸ್ ಆಯುಕ್ತ ಮನೀಶ್ ಖರ್ಬಿಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಬಿಷೇಕ್ ಗೋಯಲ್, ಪಶ್ಚಿಮ ವಲಯದ ಐಜಿಪಿ ಪ್ರತಾಪ್ ರೆಡ್ಡಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English