ಮಂಗಳೂರು : ಆಮ್ ಆದ್ಮಿ ಪಕ್ಷವು ಮಾಹಿತಿ ಹಕ್ಕು ಕಾಯ್ದೆಯಿಂದ ರಾಜಕೀಯ ಪಕ್ಷಗಳನ್ನು ಹೊರಗಿಡುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದ ನಂತರ ಸಾರ್ವಜನಿಕ ಸಂಪತ್ತನ್ನು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಡುತ್ತಿವೆ. ಈ ಪ್ರಕ್ರಿಯೆ ಎಲ್ಲಾ ಹಗರಣಗಳಿಗೆ ಕಾರಣವಾಗಿದೆ. ಆದ್ದರಿಂದ ರಾಜಕೀಯ ಪಕ್ಷಗಳ ದುಡ್ಡಿನ ಸಂಗ್ರಹ ವಿವರ ಮತ್ತು ಅಭ್ಯರ್ಥಿಗಳ ಆಯ್ಕೆ ಪಾರದರ್ಶಕವಾಗಿ ನಡೆಯುವುದು ಅಗತ್ಯವಾಗಿದೆ ಎಂದು ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ರಾಬರ್ಟ್ ರೊಸಾರಿಯೊ ಹೇಳಿದರು.
ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸಲ್ಲಿದ್ದು . ಅರವಿಂದ್ ಕ್ರೇಜಿವಾಲರ ಕರೆಗೆ ನಾವು ಸ್ಪಂದಿಸಿ ಒಂದು ಕ್ಷೇತ್ರದ ಖರ್ಚು ಭರಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರೂ.14 ಲಕ್ಷವನ್ನು ಸಂಗ್ರಹಿಸುವ ಗುರಿ ಇಟ್ಟುಕೊಂಡಿದ್ದೇವೆ ಎಂದರು.
ಪಕ್ಷದ ಕಾರ್ಯಕರ್ತ ಧರ್ಮೇಂದ್ರ ಮತ್ತು ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English