ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದಿಂದ ಸ್ಥಾಪಿಸಲಾದ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ನಿಧಿಯಿಂದ ವಿವಿಧ ಶೈಕ್ಷಣಿಕ ಶ್ರೇಣಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕೊಂಕಣಿ ಭಾಷಿಕ ವಿದ್ಯಾರ್ಥಿಗಳಿಗೆ ನಗರದ ಟಿ.ವಿ. ರಮಣ ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಜ್ಯ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಆರ್.ವಿ. ದೇಶಪಾಂಡೆ ವಿದ್ಯಾರ್ಥಿವೇತನಗಳನ್ನು ವಿತರಿಸಿದರು.
ವಿದ್ಯಾರ್ಥಿಗಳಲ್ಲಿ ನಾವೀನ್ಯತೆಗೆ (ಇನೋವೆಶನ್) ಉತ್ತೇಜನ ನೀಡಲು ಸರಕಾರ ಕ್ರಮ ಕೈಗೊಂಡಿದ್ದು ಈ ನಿಟ್ಟಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಪೋತ್ಸಾಹಧನವಾಗಿ 5 ಕೋ.ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿ, ಶಾಸಕ ಜೆ.ಆರ್. ಲೋಬೋ ಮಾತನಾಡಿ, ಪ್ರತಿಭೆ ಇದ್ದರೂ ಅರ್ಥಿಕ ಅಡಚಣೆಯಿಂದ ಕೆಲವು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮೊಟಕು ಮಾಡಬೇಕಾಗುತ್ತದೆ. ಈ ಪರಿಸ್ಥಿತಿಯಲ್ಲಿ ಇಂತಹ ವಿದ್ಯಾರ್ಥಿವೇತನಗಳು ಅವರಿಗೆ ಆಸರೆಯಾಗುತ್ತವೆ. ವಿಶ್ವಕೊಂಕಣಿ ಕೇಂದ್ರದ ವಿದ್ಯಾರ್ಥಿವೇತನ ನಿಧಿ ನೀಡುತ್ತಿರುವ ನೆರವು ಒಂದ ಪವಿತ್ರಕಾರ್ಯ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್‌ನ ಹಿರಿಯ ಉಪಾಧ್ಯಕ್ಷ, ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ನಿಧಿಯ ಅಧ್ಯಕ್ಷ ರಾಮದಾಸ ಕಾಮತ್ ಯು., ಗುರುದತ್ ಬಂಟ್ವಾಳ್ಕರ್, ವಿಶ್ವ ಕೊಂಕಣಿಕೇಂದ್ರದ ಕಾರ್ಯದರ್ಶಿ ವೆಂಕಟೇಶ ಎನ್. ಬಾಳಿಗಾ, ಉದ್ಯಮಿ ಅಣ್ಣಪ್ಪ ಕಾಮತ್, ಎಂ. ನರಸಿಂಹ ಪೈ, ಶಾಸಕ ಜೆ.ಆರ್. ಲೋಬೋ,ಸಚಿವ ಆರ್.ಪ್ರವಾಸೋದ್ಯಮ ಖಾತೆ ವಿ. ದೇಶಪಾಂಡೆ , ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ, ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ನಿಧಿಯ ಮೂಲ ಪ್ರೇರಕ ಟಿ.ವಿ. ಮೋಹನದಾಸ್ ಪೈ ಮುತಾಂದವರು ಉಪಥಿತರಿದ್ದರು.
Click this button or press Ctrl+G to toggle between Kannada and English