ಕಂಕನಾಡಿ ಮಾರುಕಟ್ಟೆ ಸಮಸ್ಯೆಗೆ ಶೀಘ್ರ ಪರಿಹಾರ: ಶಾಸಕ ಜೆ.ಆರ್.ಲೋಬೊ

10:56 AM, Thursday, September 19th, 2013
Share
1 Star2 Stars3 Stars4 Stars5 Stars
(4 rating, 6 votes)
Loading...

loboಮಂಗಳೂರು: ನಗರದ ಕಂಕನಾಡಿ ಮಾರುಕಟ್ಟೆ ಪ್ರದೇಶಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಇತರ ಅಧಿಕಾರಿಗಳ ಜತೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿನ ವ್ಯಾಪಾರಿಗಳ ಜತೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ವ್ಯಾಪಾರಿಗಳು ಮಾರುಕಟ್ಟೆ ಪ್ರದೇಶದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿದ ಶಾಸಕರು ಸಮಸ್ಯೆಗಳ ಪರಿಹಾರದ ಕುರಿತು ಸೂಕ್ತ ರೀತಿಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಕಂಕನಾಡಿ ಮಾರುಕಟ್ಟೆಯಲ್ಲಿ ಸ್ವಚ್ಚತೆಯ ಕುರಿತಂತೆ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆಯಿದೆ. ಇನ್ನುಳಿದಂತೆ  ಮಾರುಕಟ್ಟೆಯ ಛಾವಣಿಯು ಸಂಪೂರ್ಣ  ಹದಗೆಟ್ಟಿದ್ದು, ಮಳೆಗಾಲದಲ್ಲಿ ವ್ಯಾಪಾರಿಗಳು  ಬಹಳಷ್ಟು ಕಷ್ಟ ಪಡಬೇಕಾಗುತ್ತದೆ. ಈ ಮಾರುಕಟ್ಟೆಯಲ್ಲಿ ತರಕಾರಿ ಹಾಗೂ ಮೀನು ಮಾರಾಟಕ್ಕೆ ಪ್ರತ್ಯೇಕ ವ್ಯವಸ್ಥೆಯಿಲ್ಲದೇ ಇದ್ದು ಈ ಬಗ್ಗೆ ಅವುಗಳನ್ನು ವಿಭಜಿಸುವ ಕುರಿತು ಸೂಕ್ತ ರೀತಿಯ ಕ್ರಮ ಕೈಗೊಳ್ಳಲಾಗುವುದು. ನೂತನ ಮಾರುಕಟ್ಟೆ ಪ್ರಾಂಗಣದ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ಈ ಕುರಿತು ಮುಂದಿನ ಎರಡು ತಿಂಗಳಲ್ಲಿ ನಕಾಶೆಯನ್ನು ತಯಾರಿಸಿ ಬಿಡುಗಡೆಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಶಾಸಕರ ಜತೆ ಈ ಸಂದರ್ಭದಲ್ಲಿ ನವೀನ್ ಡಿಸೋಜ, ಟಿ.ಕೆ.ಸುಧೀರ್, ಕರುಣಾಕರ್ ಶೆಟ್ಟಿ, ಕೃತಿನ್, ಜಯಕರ್ ಸಮರ್ಥ ಹಾಗೂ ಇನ್ನಿತರರು ಉಪಸ್ಥಿತರಿದ್ದರು. lobo

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English