ವಿದ್ಯಾರ್ಥಿ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದ ಶಾಸಕ ಜೆ.ಆರ್.ಲೋಬೊ

12:47 PM, Friday, September 20th, 2013
Share
1 Star2 Stars3 Stars4 Stars5 Stars
(4 rating, 6 votes)
Loading...

j.r. lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿರು ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಇತ್ತೀಚೆಗೆ ಎಬಿವಿಪಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ನಿವಾಸಕ್ಕೆ ಮುತ್ತಿಗೆ ಹಾಕಿರುವ ಘಟನೆಯ ಕುರಿತಂತೆ ಶಾಸಕರು ಗುರುವಾರ ನಗರದ ಕದ್ರಿ ಹಾಗೂ ಅಶೋಕನಗರದಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಹಾಸ್ಟೆಲ್ ಗೆ ಭೇಟಿ ನೀಡಿದ ಶಾಸಕರು ಹಾಸ್ಟೆಲ್ ಗಳ ಬಹುತೇಕ ಎಲ್ಲಾ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ನೀಡಿದ ದೂರನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಾಸ್ಟೆಲ್ ಗಳಲ್ಲಿನ ಸಿಬ್ಬಂದಿಗಳು  ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಶಾಸಕರು ಸೂಚಿಸಿದರು.

ಆ ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಶಾಸಕರು, ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಿ ಹೆತ್ತವರಿಗೆ ಹಾಗೂ ಕಲಿಯುತ್ತಿರುವ ವಿದ್ಯಾ ಸಂಸ್ಥೆಗೆ ಕೀರ್ತಿ ತರುವಂತೆ ಸೂಚಿಸಿದರು. ಈ ಹಾಸ್ಟೆಲ್ ಗಳಲ್ಲಿ ಉತ್ತಮ ಸೌಲಭ್ಯಗಳಿದ್ದು, ಕೆಲವೊಂದು ಖಾಸಗಿ ಹಾಸ್ಟೆಲ್ ಗಳಿಗೆ ಹೋಲಿಸಿದರೆ ಇಲ್ಲಿನ ವ್ಯವಸ್ಥೆ ಸಾಕಷ್ಟು ಉತ್ತಮವಾಗಿದೆ. ಅದಕ್ಕಾಗಿ ನಾವು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಬೇಕಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿ ದಿಢೀರ್ ಭೇಟಿ ನೀಡಲಿದ್ದು ವಿದ್ಯಾರ್ಥಿಗಳು ಸಮಸ್ಯೆಗಳಿದ್ದರೆ ಯಾವುದೇ ಹಿಂಜರಿಕೆಯಿಲ್ಲದೆ ನೇರವಾಗಿ ತಮ್ಮನ್ನು ಭೇಟಿಯಾಗಬಹುದು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ರೇಣುಕಾ, ರಾಮು, ಪ್ರಸಾದ್, ಅರುಣ್ ಫುರ್ತಾಡೊ, ಹೇಮಂತ್, ಪಾಲಿಕೆ ಸದಸ್ಯರಾದ ನಾಗವೇಣಿ, ರಾಧಾಕೃಷ್ಣ ಹಾಗೂ ಇನ್ನಿತರ ಅಧಿಕಾರಿಗಳು ಮತ್ತು ರಾಜಕೀಯ ನೇತಾರರು ಶಾಸಕರ ಜತೆಯಲ್ಲಿ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English