ಪೌರ ಕಾರ್ಮಿಕರಿಗೆ ಎಡ್ಸ್ ಬಗ್ಗೆ ಜಾಗೃತಿ ಕಾರ್ಯಕ್ರಮ

9:23 PM, Monday, November 22nd, 2010
Share
1 Star2 Stars3 Stars4 Stars5 Stars
(No Ratings Yet)
Loading...

ಎಡ್ಸ್ ಬಗ್ಗೆ  ವಿಶೇಷ ಜಾಗೃತಿ ಕಾರ್ಯಕ್ರಮಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಹಾಗೂ ಡಾ|ಎಂ.ವಿ.ಶೆಟ್ಟಿ ಕಾಲೇಜು ಜಂಟಿ ಆಶ್ರಯದಲ್ಲಿ ಪಾಲಿಕೆ ಸಭಾಂಗಣದಲ್ಲಿ ಪೌರ ಕಾರ್ಮಿಕರಿಗೆ ಎಡ್ಸ್ ಬಗ್ಗೆ  ವಿಶೇಷ ಜಾಗೃತಿ ಕಾರ್ಯಕ್ರಮವನ್ನು  ಉಪಮೇಯರ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು.

ಎಡ್ಸ್ ಬಗ್ಗೆ  ವಿಶೇಷ ಜಾಗೃತಿ ಕಾರ್ಯಕ್ರಮಬಳಿಕ ಮಾತನಾಡಿದ ಅವರು ಪೌರ ಕಾರ್ಮಿಕರಿಗೆ ಅರಿವು ಮೂಡಿಸುವ ಈ ಕಾರ್ಯಕ್ರಮ ಸ್ತುತ್ಯರ್ಹ, ರೋಗ ರಹಿತ ಭಾರತ ನಿರ್ಮಾಣ ಮಾಡಲು ಮುಂದಾಗೋಣ ಎಂದು ಅವರು ಕರೆ ನೀಡಿದರು.

ಎಡ್ಸ್ ಬಗ್ಗೆ  ವಿಶೇಷ ಜಾಗೃತಿ ಕಾರ್ಯಕ್ರಮಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮ.ನ.ಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತ.ಆರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಪೊರೇಶನ್ ಬ್ಯಾಂಕ್ ನ ಜಿ.ಎಮ್ ಎಂ.ಸಿ.ಪ್ರಭು, ಎಂ.ವಿ.ಶೆಟ್ಟಿ ಮೆಮೊರಿಯಲ್ ಟ್ರಸ್ಟ್ ನ ಮುಖ್ಯಸ್ಥ ಡಾ|ಎಂ.ರಾಮಗೋಪಾಲ್ ಶೆಟ್ಟಿ ಭಾಗವಹಿಸಿದ್ದರು. ಎಂ.ವಿ.ಶೆಟ್ಟಿ ಕಾಲೇಜಿನ ಉಪನ್ಯಾಸಕಿ ಕಾರ್ಲೊ ಡಿ’ಸೋಜಾ ಉಪಸ್ಥಿತರಿದ್ದರು.
ಮ.ನ.ಪಾ ಸಹಾಯಕ ಆರೋಗ್ಯಧಿಕಾರಿ ರಘುಪತಿ ಸ್ವಾಗತಿಸಿದರು. ಹರೀಶ್ ಶೆಟ್ಟಿ ವಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English