ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ ವತಿಯಿಂದ ಸ್ಕಾಲರ್ಶಿಪ್ ವಿತರಣಾ ಕಾರ್ಯಕ್ರಮವು ನಗರದ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ದಿನಾಂಕ 04-10-2013ರಂದು ನಡೆಯಿತು.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಪುತ್ತರೂ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್, ಮುಸ್ಲಿಮರು ಹಾಗೂ ಇತರ ಹಿಂದುಳಿದ ಸಮುದಾಯಗಳಲ್ಲಿ ಶಿಕ್ಷಣವನ್ನು ಪ್ರೋತ್ಸಾಹಿಸುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯವನ್ನು ಶ್ಲಾಘಿಸಿದರು. ಸಂಘಟನೆಯ ಸ್ಕಾಲರ್ಶಿಪ್ ಯೋಜನೆಯ ಸದುಪಯೋಗಪಡಿಸಿಕೊಂಡ ವಿದ್ಯಾರ್ಥಿಗಳು ಮುಂದೆ ಅದರ ಪ್ರಯೋಜನವನ್ನು ಸಮುದಾಯಕ್ಕೆ ನೀಡಬೇಕು ಎಂದರು.
ಮುಸ್ಲಿಮ್ ಸಮುದಾಯವು ಶಿಕ್ಷಣದಲ್ಲಿ ಹಿಂದುಳಿದಿದೆ ಎಂದು ಸಾಚಾರ್ ಸಮಿತಿ ವರದಿ ಹೇಳಿದೆ. ಅದೇ ರೀತಿಯಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳಾಗಿ ಹಾಗೂ ಕಾನೂನು ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಮುಸ್ಲಿಮರು ತೀರಾ ಹಿಂದುಳಿದಿದ್ದಾರೆ. ಶಿಕ್ಷಣ ಮುಗಿಸಿ ಗಲ್ಫ್ ರಾಷ್ಟ್ರಗಳತ್ತ ಆಕರ್ಷಿತರಾಗುವ ಬದಲು ಮುಸ್ಲಿಮ್ ವಿದ್ಯಾರ್ಥಿಗಳು ಈ ಕ್ಷೇತ್ರಗಳೆಡೆಗೆ ಗಮನ ಕೊಡಬೇಕು ಎಂದು ಅವರು ಕರೆ ನೀಡಿದರು.
ಪಾಪ್ಯುಲರ್ ಫ್ರಂಟ್ನ ಕಮ್ಯುನಿಟಿ ಡೆವಲಪ್ಮೆಂಟ್ ಇನ್ಚಾಜರ್್ ಮುಹಮ್ಮದ್ ಕಕ್ಕಿಂಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಾಪ್ಯುಲರ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಎ.ಎಂ.ಅಥಾವುಲ್ಲಾ ಜೋಕಟ್ಟೆ ಸ್ವಾಗತಿಸಿ, ಅಶ್ರಫ್ ಜೋಕಟ್ಟೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ, ಅಹಿಂದ ಜನಚಳವಳಿಯ ಗೌರವಾಧ್ಯಕ್ಷ ವಾಸುದೇವ ಬೋಳೂರು, ಕರ್ನಾಟಕ ಮಿಶನ್ಸ್ ನೆಟ್ವಕರ್್ನ ಚೆಯರ್ಮ್ಯಾನ್ ವಾಲ್ಟರ್ ಮಾಬೆನ್ ಸಾಂದರ್ಭಿಕವಾಗಿ ಮಾತನಾಡಿದರು. ಎಸ್ಡಿಪಿಐ ದ.ಕ.ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English