ದ.ಕ ಜಿಲ್ಲೆಯಲ್ಲಾದ ಮಹಿಳೆಯರ ಅಸಹಜ ಸಾವುಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

12:29 PM, Thursday, October 10th, 2013
Share
1 Star2 Stars3 Stars4 Stars5 Stars
(4 rating, 6 votes)
Loading...

Protestಮಂಗಳೂರು : ದ.ಕ ಜಿಲ್ಲೆಯಲ್ಲಾದ ಮಹಿಳೆಯರ ಅಸಹಜ ಸಾವುಗಳ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿ‌ಐ ತನಿಖೆಗೆ ಒತ್ತಾಯಿಸುವಂತೆ ವಿವಿಧ ಸಂಘಟನೆಗಳ ವತಿಯಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಯಿತು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಟಿ.ಎನ್.ಸೀಮಾ ಅವರು ಪ್ರತಿಭಟನೆಯನ್ನುದ್ದೇಶಿಸಿ ,  ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿಯಾದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೊಳಗಾಗಿ ಒಂದು ವರ್ಷವಾಗಿದೆ. ಇಲ್ಲಿಯವರೆಗೂ ನಿಜವಾದ ಅಪರಾಧಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗಿಲ್ಲ. ಮಾನಸಿಕ ಅಸ್ವಸ್ಥನೊಬ್ಬನನ್ನು ಬಂಧಿಸಿ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನಮಾಡಲಾಗಿದೆ. ಅಮಾಯಕ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆಕೆಯ ಹೆತ್ತವರಿಗೆ ನ್ಯಾಯ ದೊರಕಬೇಕು ಅಲ್ಲದೇ ನೈಜ ಆರೋಪಿಗಳಿಗೆ ಶಿಕ್ಷೆಯಾಗಬೇಕಾದರೆ ಪ್ರಕರಣದ ತನಿಖೆಯನ್ನು ಸಿಬಿ‌ಐಗೆ ವಹಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

Protest

ರಾಷ್ಟ್ರದ ಒಟ್ಟು ಅಪರಾಧಗಳಲ್ಲಿ ರಾಜ್ಯವು 10ನೇ ಸ್ಥಾನದಲ್ಲಿದೆ. ಅದರಲ್ಲೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ಚಿತ್ರಣ ಕರ್ನಾಟಕದಲ್ಲಿ ಮಹಿಳೆಯರೆಷ್ಟು ಸುರಕ್ಷಿತ ಎಂಬುದನ್ನು ಸಾರುತ್ತಿವೆ. ಕಳೆದ ವರ್ಷದ ಅವಧಿಯಲ್ಲಿ 2706 ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದು ಮಹಿಳೆಯರ ಬಗೆಗಿನ ನಿರ್ಲಕ್ಷವನ್ನು ತೋರಿಸುತ್ತದೆ.ನಮ್ಮ ಜಿಲ್ಲೆಯಲ್ಲಿ ಮಹಿಳೆಯರ ಅಸಹಜ ಸಾವುಗಳು ಹೆಚ್ಚಾಗುತ್ತಿವೆ. ಈ ಅಸಹಜ ಸಾವುಗಳನ್ನು ತನಿಖೆಮಾಡಿ ತಕ್ಕ ಕ್ರಮ ಕೈಗೊಳ್ಳ ಬೇಕು. ಒಂದು ವೇಳೆ ಮನವಿಯನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ತೀವ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ  ಸಂದರ್ಭದಲ್ಲಿ ಮಾತನಾಡಿದ ಸೌಜನ್ಯ ತಾಯಿ ಕುಸುಮ, ತಮ್ಮ ಪರೀಕ್ಷೆ ಬರೆಯಲು ಎಂದು ತೆರಳಿದ್ದ ನನ್ನ ಮಗಳನ್ನು ಅತ್ಯಾಚಾರಗೈದು ಕೊಲೆ ನಡೆಸಿರುವ ದುರುಳರನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದು, ಈ ಬಗೆಗೆ ನಾವು ಎಷ್ಟು ಬಾರಿ ಪೊಲೀಸರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇಲ್ಲಿರುವವರೆಲ್ಲರೂ ಸೇರಿ ನಮಗೆ ನ್ಯಾಯ ಒದಗಿಸಿಕೊಡಬೇಕು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಅಖಿಲ ಭಾರತ ವಕೀಲರ ಸಂಘ, ಮಹಿಳಾ ದೌರ್ಜನ್ಯ ವಿರೋದಿ ವೇದಿಕೆ, ಸಮತಾ ಮಹಿಳಾ ವೇದಿಕೆ, ಕರ್ನಾಟಕ ಲೇಖಕಿಯರ ಸಂಘ, ಸಮುದಾಯ ಸಾಂಸ್ಕೃತಿಕ ಸಂಘಟನೆ, ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಕೆ.ನೀಲಾ, ಡಿ.ವೈ.ಎಫ್.ಐ ರಾಜ್ಯಾಧ್ಯಕ್ಷರಾದ ಎನ್.ಎಲ್.ಭರತ್ ರಾಜ್, ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಕಾರ್ಯದರ್ಶಿ ದಯಾನಂದ, ಎಸ್.ಎಫ್.ಐ ನ ದ.ಕ ಜಿಲ್ಲಾ ಸಮಿತಿ ಅಧ್ಯಕ್ಷರಾಧ ನಿತಿನ್ ಕುತ್ತಾರ್, ಕಾರ್ಯದರ್ಶಿ ರಝಾಕ್, ಜೆ.ಎಂ.ಎಸ್ ನ ಅಧ್ಯಕ್ಷರಾದ ಹೇಮಲತ ಹಾಗೂ ಕಾರ್ಯದರ್ಶಿ ಕಿರಣ ಪ್ರಭಾ  ಮುಂತಾದ ಸಂಘಟನೆಗಳ ಮುಖಂಡರುಗಳು ಭಾಗವಹಿಸಿದ್ದರು. Protest

Protest

Protest

Protest

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English