ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸರಕಾರ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು : ಹಿಂದೂ ನಾಯಕ ಮಹೇಶ ಶೆಟ್ಟಿ ತಿಮರೋಡಿ

3:11 PM, Friday, October 11th, 2013
Share
1 Star2 Stars3 Stars4 Stars5 Stars
(4 rating, 6 votes)
Loading...

mafiyaಮಂಗಳೂರು : ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸರಕಾರ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್‌ ಆಂದೋಲನ ನಡೆಸಲಾಗುವುದು ಎಂದು ಹಿಂದೂ ನಾಯಕ ಮಹೇಶ ಶೆಟ್ಟಿ ತಿಮರೋಡಿ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿ ಒಂದು ವರ್ಷ ಕಳೆದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನನ್ನು ಆರೋಪಿ ಎಂದು ಬಿಂಬಿಸಲಾಗಿದೆ. ಆದರೆ ಆತನ ಮೇಲೆ ಯಾವುದೇ ಆಪಾದನೆಗಳಿಲ್ಲ. ಪೊಲೀಸ್‌ ಇಲಾಖೆ ಮೇಲೆ ಒತ್ತಡ ಹೇರಿ ಪ್ರಕರಣದ ದಿಕ್ಕು ತಪ್ಪಿಸಲಾಗುತ್ತಿದೆ. ಪ್ರಕರಣದ ನಿಜವಾದ ಆರೋಪಿಗಳನ್ನು ಬಚ್ಚಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಬೆಳ್ತಂಗಡಿ ಪರಿಸರದ ಪ್ರತಿ ಮನೆಗಳಲ್ಲಿ ಈಗ ಭಯದ ವಾತಾವರಣ ನಿರ್ಮಾಣವಾಗಿದೆ. ಸೌಜನ್ಯಾ ಹೆತ್ತವರು ತನಿಖಾಧಿಕಾರಿಗಳಿಗೆ ನೀಡಿದ ದೂರಿನಲ್ಲಿ ನಾಲ್ವರು ವ್ಯಕ್ತಿಗಳ ಹೆಸರನ್ನು ಉಲ್ಲೇಖೀಸಿದ್ದರೂ ಈವರೆಗೆ ಅವರ ತನಿಖೆ ನಡೆದಿಲ್ಲ. ಹೊಸದಿಲ್ಲಿ ಮತ್ತು ಮಣಿಪಾಲದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಬೇಧಿಸಿದ ಪೊಲೀಸರಿಗೆ ಸೌಜನ್ಯಾ ಕೊಲೆ ಪ್ರಕರಣವನ್ನು ಬೇಧಿಸುವುದು ಅಸಾಧ್ಯವಲ್ಲ ಎಂದು ಅವರು ತಿಳಿಸಿದರು.

ಪರಿಸರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಯುವತಿಯರೂ ಸೇರಿದಂತೆ ಸುಮಾರು 450 ಅಸಹಜ ಸಾವುಗಳು ಸಂಭವಿಸಿವೆ. ಆದರೆ ಯಾವುದೇ ಪ್ರಕರಣದಲ್ಲಿ ನಿಯಮಾನುಸಾರ ಕ್ರಮ ಜರಗಿಸಿ ಶವಗಳ ವಾರಸುದಾರರನ್ನು ಪತ್ತೆ ಮಾಡಿಲ್ಲ. ಸೌಜನ್ಯ ಪ್ರಕರಣದಲ್ಲಿ ಯಾರೇ ಧ್ವನಿ ಎತ್ತಿದರೂ ಅವರಿಗೆ ಪೂರ್ಣ ಸಹಕಾರ ನೀಡಲಾಗುವುದು ಎಂದು ಮಹೇಶ್‌ ತಿಳಿಸಿದರು.

ಮೃತ ಸೌಜನ್ಯಾ ತಂದೆ ಚಂದಪ್ಪ ಗೌಡ, ತಾಯಿ ಕುಸುಮಾವತಿ, ಮಾವ ವಿಠಲ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English