ಬೆಂಗಳೂರು : ಜಾಕಿ ಚಿತ್ರದಲ್ಲಿನ ಉತ್ತಮ ಅಭಿನಯಕ್ಕಾಗಿ ನಾಯಕ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮತ್ತು ಸಂಜು ವೆಡ್ಸ್ ಗೀತಾ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ನಾಯಕಿ ಹಾಗೂ ಲೋಕಸಭೆ ಸದಸ್ಯೆ ರಮ್ಯಾ ಅವರಿಗೆ ರಾಜ್ಯ ಪ್ರಶಸ್ತಿ ಲಭಿಸಿದೆ.
2010-11ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ವಾರ್ತಾ ಸಚಿವ ಸಂತೋಷ್‌ಲಾಡ್ ಶುಕ್ರವಾರ ಬಿಡುಗಡೆ ಮಾಡಿದರು. ಇದಕ್ಕೂ ಮುನ್ನ ಹಿರಿಯ ನಿರ್ದೇಶಕ ಭಗವಾನ್ ಅಧ್ಯಕ್ಷತೆಯಲ್ಲಿನ ಸಮಿತಿ ಪಟ್ಟಿ ಅಂತಿಮಗೊಳಿಸಿ ಸಚಿವರಿಗೆ ಸಲ್ಲಿಸಿತು.
ಕನ್ನಡ ಚಿತ್ರರಂಗಕ್ಕೆ ಅಪೂರ್ವ ಕೊಡುಗೆ ನೀಡಿದ ನಿರ್ದೇಶಕರಿಗೆ ನೀಡುವ ದಿ.ಪುಟ್ಟಣ್ಣ ಕಣಗಾಲ್ ಪ್ರಶಸ್ತಿಹಿರಿಯ ನಿರ್ದೇಶಕ ಭಾರ್ಗವ ಅವರಿಗೆ, ಚಿತ್ರರಂಗದ ಸಮಗ್ರ ಬೆಳವಣಿಗೆಗೆ ನೀಡುವ ಡಾ.ರಾಜ್‌ಕುಮಾರ್ ಪ್ರಶಸ್ತಿ ಎಸ್.ಶಿವರಾಂಗೆ, ವಿವಿಧ ವಲಯಗಳಲ್ಲಿ ಮಾಡಿದ ಸಾಧನೆಗೆ ನೀಡುವ ಡಾ.ವಿಷ್ಣುವರ್ಧನ್ ಪ್ರಶಸ್ತಿ ಹಿರಿಯ ನಟ, ಸಚಿವ ಅಂಬರೀಷ್‌ಗೆ ನೀಡಲಾಗಿದೆ.
ಈ ಪ್ರಶಸ್ತಿ ರು. 2ಲಕ್ಷ ನಗದು ಹಾಗೂ ಚಿನ್ನಲೇಪಿತ ಫಲಕವನ್ನು ಒಳಗೊಂಡಿದ್ದು, ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಾರ್ತಾ ಸಚಿವ ಸಂತೋಷ್ ಲಾಡ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜಾಕಿ ಚಿತ್ರದಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ಪುನಿತ್ ರಾಜ್‌ಕುಮಾರ್ ಅವರಿಗೆ ಉತ್ತಮ ನಟ ಹಾಗೂ ಸಂಜು ವೆಡ್ಸ್ ಗೀತಾ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ನಟಿ, ಸಂಸದೆ ರವಮ್ಯ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ನೀಡಲಾಗಿದೆ. ವಿಶೇಷ ತಾಂತ್ರಿಕತೆ, ವೇಷಭೂಷಣ ಮತ್ತು ಇತರೆ ವಿಷಯಗಳಿಗೆ ನೀಡುವ ವಿಶೇಷ ಪ್ರಶಸ್ತಿ ಸೂಪರ್ ಚಿತ್ರದ ಪಾಲಾಗಿದೆ.
ಈ ಹಿಂದೆ ಪ್ರಕಟಿಸಲಾದ ವಿವಾದಾತ್ಮಕ ಪಟ್ಟಿಯಲ್ಲಿ ನೀಡಲಾದ ಮೂರು ಜೀವಮಾನದ ಸಾಧನೆ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿಯನ್ನು ಹೊರತುಪಡಿಸಿ ಉಳಿದೆಲ್ಲ ಪಟ್ಟಿಯನ್ನು ಬದಲಾಯಿಸಲಾಗಿದೆ.
Click this button or press Ctrl+G to toggle between Kannada and English