ಮಂಗಳೂರು : ಅನ್ನಭಾಗ್ಯ, ಶಾದಿಭಾಗ್ಯ ಮುಂತಾದ ಯೋಜನೆ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಅಂಗನವಾಡಿ ಮಕ್ಕಳಿಗಾಗಿ ಬಿಸ್ಕೆಟ್ ಭಾಗ್ಯ ಯೋಜನೆ ಜಾರಿಗೆ ತರಲು ಮುಂದಾಗಿದೆ. ‘ಆಯುಷ್ ಪುಷ್ಟಿ’ ಎಂಬ ಬಿಸ್ಕತ್ತು ತಯಾರಿಸಿ ಅಂಗನವಾಡಿ ಮಕ್ಕಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬುಧವಾರ ಪತ್ರಿಕಾಗೋಷ್ಠಿ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಆಯುರ್ವೇದಿಕ್ ಗಿಡಮೂಲಿಕೆಗಳಿಂದ ತಯಾರಿಸಿದ ಆಯುಷ್ ಪುಷ್ಟಿ ಬಿಸ್ಕತ್ ಗಳನ್ನು ಅಂಗನವಾಡಿ ಮಕ್ಕಳಿಗೆ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪೌಷ್ಟಿಕಾಂಶ ಕೊರತೆ ಅನುಭವಿಸುತ್ತಿರುವ ಮಕ್ಕಳಿರುವ ಒಂದು ತಾಲೂಕಿನಲ್ಲಿ ಆರಂಭಿಸಿ, ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದರು.
ಆಯುಷ್ ಪುಷ್ಟಿ ಬಿಸ್ಕತ್ತು ಉತ್ಪಾದನಾ ಕೇಂದ್ರವನ್ನು ಆಯುಷ್ ಇಲಾಖೆ ವತಿಯಿಂದ ನಡೆಸಲಾಗುವುದು. ಒಂದು ತಾಲೂಕಿಗೆ ಬೇಕಾಗುವಷ್ಟು ಬಿಸ್ಕತ್ತು ಈಗಾಗಲೇ ಸಿದ್ಧಪಡಿಸಲಾಗಿದೆ. ಮಕ್ಕಳ ಆರೋಗ್ಯವನ್ನು ಸುಸ್ಥಿರಗೊಳಿಸುವ ಏಕೈಕ ಉದ್ದೇಶದಿಂದ ಈ ಬಿಸ್ಕತ್ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
Click this button or press Ctrl+G to toggle between Kannada and English