ಮಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಅಂಗವಾಗಿ ರವಿವಾರ ನಗರದ ಜ್ಯೋತಿ ವೃತ್ತದಿಂದ ನೆಹರೂ ಮೈದಾನದ ವರೆಗೆ ‘ಏಕತೆಗಾಗಿ ಓಟ’ ಏರ್ಪಡಿಸಲಾಗಿತ್ತು.
ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಕರಾವಳಿ ಶಿಕ್ಷಣ ಸಂಸ್ಥೆ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ಅವರು ಏಕತೆಗಾಗಿ ಓಟ ಕ್ಕೆ ಚಾಲನೆ ನೀಡಿದರು.
ಗಣೇಶ್ ರಾವ್, ಮಾತನಾಡಿ ದೇಶದ ಕೀರ್ತಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗುವಂತಾಗಲು ಯುವ ಜನತೆ ಒಗ್ಗಟ್ಟಾಗಬೇಕು. ಅಬ್ದುಲ್ ಕಲಾಂ ಕನಸು ನನಸು ಮಾಡಲು ಕೇವಲ ಯುವಜನತೆಯಿಂದ ಮಾತ್ರ ಸಾಧ್ಯ ಎಂದರು.
ನಗರದ ಜ್ಯೋತಿ ವೃತ್ತದಿಂದ ಆರಂಭವಾದ ಓಟ ನೆಹರೂ ಮೈದಾನದಲ್ಲಿ ಕೊನೆಗೊಂಡಿತು. ಅನಂತರ ಓಟದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರ ನೀಡಲಾಯಿತು. ಸರ್ದಾರ್ ವಲ್ಲಭ ಭಾಯಿ ಪಟೇಲ್ ಲೋಹ ಸಂಗ್ರಹ ಸಮಿತಿ ಓಟವನ್ನು ಆಯೋಜಿಸಲಾಗಿತ್ತು. ವಿವಿಧ ವಾರ್ಡ್‌ಗಳ ಕಾರ್ಪೊರೇಟರ್‌ಗಳು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪತಂಜಲಿ ಯೋಗ ಪೀಠದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಸುಮಾರು 4,000 ಮಂದಿ ಏಕತೆಗಾಗಿ ನಡೆದ ಓಟದಲ್ಲಿ ಭಾಗವಹಿಸಿದ್ದರು.
ವಿಧಾನ ಪರಿಷತ್ ಸದಸ್ಯರಾದ ಕ್ಯಾ| ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಮಾಜಿ ಶಾಸಕ ಯೋಗೀಶ್ ಭಟ್, ಮಾಜಿ ಸಚಿವ ನಾಗರಾಜ ಶೆಟ್ಟಿ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಶಾರದಾ ವಿದ್ಯಾಲಯದ ಅಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್, ನಿಟ್ಟೆ ಫಾರ್ಮಸಿ ಕಾಲೇಜಿನ ಪ್ರೊ| ಶಾಸ್ತ್ರಿ ಲೋಹ ಸಂಗ್ರಹ ಸಮಿತಿ ಸಂಚಾಲಕ ಡಾ| ವೈ ಭರತ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English