- Mega Media News Kannada - https://kannada.megamedianews.com -

ಸುನಂದಾ ಸಾವಿನ ತನಿಖೆ ಕ್ರೈಮ್ ಬ್ರಾಂಚ್ ಪೊಲೀಸರಿಗೆ

Sunanda-Pushkar [1]ನವದೆಹಲಿ: ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ತನಿಖೆಯನ್ನು ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಈ ಪ್ರಕರಣದಲ್ಲಿ ಒಳಗೊಂಡ ವಿವಿಧ ಅಂಶಗಳನ್ನು ಪರಿಗಣಿಸಿ ಈ ಪ್ರಕರಣನ್ನು ಕ್ರೈಮ್ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ. ಸುನಂದಾ ಸಾವಿನ ತನಿಖೆ ನಡೆಸಿದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರಕರಣದ ಹತ್ಯೆ ಅಥವಾ ಆತ್ಮಹತ್ಯೆಯ ವಿವಿಧ ಕೋನಗಳನ್ನು ತನಿಖೆ ಮಾಡುವಂತೆ ಆದೇಶಿಸಿದ್ದಾರೆ..

ಮರಣೋತ್ತರ ಪರೀಕ್ಷೆ ವರದಿಯಲ್ಲಿ ಔಷಧಿಯ ಅತಿಸೇವನೆಯಿಂದ ವಿಷಕಾರಿಯಾಗಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ತರೂರ್ ಜತೆ ಪಾಕಿಸ್ತಾನದ ಪತ್ರಕರ್ತೆ ಮೆಹರ್ ತೆರಾರ್ ಸಂಪರ್ಕ ಹೊಂದಿದ್ದಾಳೆಂದು ಸುನಂದಾ ಟ್ವಿಟರ್‌ನಲ್ಲಿ ಆಕ್ರೋಶ ತೋಡಿಕೊಂಡಿದ್ದರು.