ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಪೋಷಕರು ,ಶಿಕ್ಷಕರು ಸಹಕರಿಸಬೇಕು-ಎ.ಬಿ.ಇಬ್ರಾಹಿಂ

4:53 PM, Thursday, February 6th, 2014
Share
1 Star2 Stars3 Stars4 Stars5 Stars
(No Ratings Yet)
Loading...
dc Ibrahim

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆ ಅತ್ಯಂತ ಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ಜಿಲ್ಲೆಯಾಗಿದ್ದರೂ ಸಹ 2-3 ವರ್ಷಗಳಿಂದ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಮಾಣ ಅತ್ಯಂತ ಕಳವಳಕಾರಿಯಾಗಿದ್ದು ಫಲಿತಾಂಶ ಪ್ರಮಾಣ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಪೋಷಕರು/ಶಿಕ್ಷಕರು ಸಹಕರಿಸುವಂತೆ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ.

ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆ ಸಾಕ್ಷರತೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.ನೈರ್ಮಲ್ಯದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಹಾಗೂ ರಾಷ್ಟ್ರ ಮಟ್ಟದಲ್ಲಿ 10 ನೇ ಸ್ಥಾನದಲ್ಲಿದೆ.ಜಿಲ್ಲೆ ಎಲ್ಲಾ ರಂಗಗಳಲ್ಲು ಮುಂದಿದ್ದರೂ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 26 ನೇ ಸ್ಥಾನಕ್ಕೆ ದೂಡಲ್ಪಟ್ಟಿರುವುದು ಅತ್ಯಂತ ದಯನೀಯವಾಗಿದೆ ಎಂದು ತಿಳಿಸಿದರು.

2009 ರಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಮಾಣ ಶೇ.81.98 ಇದ್ದರೆ,2010 ರಲ್ಲಿ ಶೇ.77.36,2011 ರಲ್ಲಿ ತಕ್ಕ ಮಟ್ಟಿಗೆ ಸುಧಾರಣೆಯಾಗಿ ಶೇ.83.15 ಕ್ಕೇರಿತು.2012 ರಲ್ಲಿ ಇನ್ನೂ ಸುಧಾರಣೆಯಾಗಿ ಶೇ.85.24 ಆಯಿತು.ಆದರೆ 2013 ರಲ್ಲಿ ಶೇಕಡಾವಾರು ಪ್ರಮಾಣ 78.78 ಕ್ಕೆ ಕುಸಿದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಅತ್ಯಂತ ಕಳವಳಗೊಂಡಿದ್ದಾರೆ.

ಶೇಕಡಾ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ 45 ಶಾಲೆಗಳ ಫಲಿತಾಂಶ ಸುಧಾರಣೆಗೆ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಮುಖ್ಯೋಪಾಧ್ಯಾಯರ ಸಭೆಯನ್ನು ಕರೆದು ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಮಾರ್ಗದರ್ಶನ ನೀಡಲಾಗಿದೆ ಹಾಗೂ ಈ ಶಾಲೆಗಳ ಬಗ್ಗೆ ಇನ್ನೂ ಹೆಚ್ಚಿನ ವಿಶೇಷ ಗಮನ ನೀಡಲು ಎಲ್ಲಾ 45 ಶಾಲೆಗಳನ್ನು ಶಿಕ್ಷಣ ಇಲಾಖಾಧಿಕಾರಿಗಳಿಗೆ ದತ್ತು ನೀಡಿದ್ದು,ಅಧಿಕಾರಿಗಳು ಈ ಶಾಲೆಗಳಿಗೆ ಕನಿಷ್ಠ 3 ತಿಂಗಳಿಗೊಮ್ಮೆ ಭೇಟಿ ನೀಡಿ ಅಲ್ಲಿ ಫಲಿತಾಂಶ ಉತ್ತಮ ಪಡಿಸಲು ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿ, ಅಗತ್ಯ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಮೊಸೆಸ್ ಜಯಶೇಖರ್ ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದ ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ಶೇಕಡಾ 73 ರಷ್ಟು ತೇರ್ಗಡೆಯಾಗುತ್ತಿರುವ ಬಗ್ಗೆ ಹಾಗೂ ಇತರೆ ಸಮುದಾಯಗಳ ಮಕ್ಕಳಿಗಿಂತ ಕಡಿಮೆ ಪ್ರಮಾಣದಲ್ಲಿ ಉತ್ತೀರ್ಣರಾಗುತ್ತಿರುವ ಬಗ್ಗೆ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು, ಸದ್ರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ವಾರಕ್ಕೊಮ್ಮೆ ಭೇಟಿ ನೀಡಿ ಮಕ್ಕಳು ಯಾವ ವಿಷಯಗಳಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಂತಹ ಮಕ್ಕಳಿಗೆ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಅವರೂ ಇತರೆ ಸಮುದಾಯದವರಂತೆ ಮುಂದೆ ಬರಲು ಪ್ರಯತ್ನಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ದಯಾನಂದ,ಉಪವಿಭಾಗಾಧಿಕಾರಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English