ಬೆಂಗಳೂರು : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ.
ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು.
ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ ಸರಕಾರ ಎರಡೂವರೆ ವರ್ಷದಲ್ಲಿ ಏನು ಮಾಡಿಲ್ಲ, ರಾಜ್ಯದ ಸಂಪತ್ತನ್ನೇ ಲೂಟಿ ಮಾಡಿ, ಅಧಿಕಾರಕ್ಕಾಗಿ ಕಿತ್ತಾಟ ನಡೆಸಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿಯವರು ಚುನಾವಣೆ ಫಲಿತಾಂಶವನ್ನು ಜನಪರ ಎಂದು ಭಾವಿಸಬೇಕಿಲ್ಲ. ಹಾಗೆಂದುಕೊಂಡರೆ ಅದು ತಪ್ಪು. ಸ್ಪೆಕ್ಟ್ರಂ ಹಗರಣದಿಂದ ರಾಜೀನಾಮೆ ನೀಡಿರುವ ಎ. ರಾಜಾ, ನಂತರ ಚುನಾವಣೆ ಯಲ್ಲಿ ಗೆದ್ದು ಬಂದರೆ ಅದನ್ನು ಜನಾದೇಶವೆಂದು ಒಪ್ಪಲಾಗದು. ಇದಕ್ಕೆ ಬಿಜೆಪಿಯ ವರಿಷ್ಠರು ಸಮ್ಮತಿಸಿದರೆ ನಾನೂ ಬಾಯಿ ಮುಚ್ಚಿಕೊಳ್ಳುತ್ತೇನೆ ಎಂದು ಹೇಳಿದರು.
Click this button or press Ctrl+G to toggle between Kannada and English