ಕೃಷ್ಣಾ ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

3:09 PM, Tuesday, February 18th, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Siddaramaiahಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2013 ನವೆಂಬರ್ 29 ರಂದು ಕೃಷ್ಣಾ ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಹಿರಿಯ ವಕೀಲ ನಾರಿಮನ್ ಅವರ ಸಲಹೆಯಂತೆ ಕೃಷ್ಟಾ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಪಾಡು ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಸ್ಪಷ್ಟಿಕರಣಕ್ಕಾಗಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕೃಷ್ಣಾ ನ್ಯಾಯಾಧೀಕರಣ ತೀರ್ಪಿಗೆ ಮೇಲ್ಮನವಿ ಸಲ್ಲಿಸುವಂತೆ ಪ್ರತಿಪಕ್ಷಗಳು ಸಹ ಸಲಹೆ ನೀಡಿದ್ದವು ಎಂದು ಸಿಎಂ ಸಿದ್ದು ಹೇಳಿದ್ದಾರೆ.

ಆಲಮಟ್ಟಿ ಜಲಾಶಯದ ಅಣೆಕಟ್ಟೆಯನ್ನು 524 ಮೀಟರ್‌ಗೆ ಏರಿಸಿರುವುದನ್ನು ವಿರೋಧಿಸಿ ಆಂಧ್ರಪ್ರದೇಶ ಸಲ್ಲಿಸಿದ್ದ ಅರ್ಜಿಯನ್ನು ಕೃಷ್ಣಾ ನ್ಯಾಯಾಧೀಕರಣ ತಳ್ಳಿಹಾಕಿತ್ತು. ಅಲ್ಲದೆ ಆಲಮಟ್ಟಿ ಅಣೆಕಟ್ಟು ಎತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನ್ಯಾಯಾಧೀಕರಣ ಸ್ಪಷ್ಟಪಡಿಸಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English