‘ರಾಜೀವ್’ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ

1:09 PM, Thursday, February 20th, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Manmohan-Singhನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. ಈ ವಿಚಾರವನ್ನು ತಾವು ಲಘುವಾಗಿ ಪರಿಗಣಿಸಬಾರದು ಎಂದಿರುವ ಪ್ರಧಾನಿ ಸಿಂಗ್, ಉಗ್ರರ ಬಗ್ಗೆ ಮೃದು ಧೋರಣೆ ಸರಿಯಲ್ಲ ಎಂದು ಹೇಳಿದ್ದಾರೆ.

ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ಜಯಲಲಿತಾ ನಿರ್ಧಾರದವನ್ನು ಖಂಡಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಿನ್ನೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English