ಲೋಕಾ ವ್ಯಾಪ್ತಿಗೆ ಮುಖ್ಯಮಂತ್ರಿ ಸಂಪುಟ ಸದಸ್ಯರು

3:56 PM, Saturday, February 22nd, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Siddaramaiahಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೋಕಪಾಲ ಕಾಯಿದೆ ಹಿನ್ನೆಲೆಯಲ್ಲಿ ರಾಜ್ಯದ ಲೋಕಾಯುಕ್ತ ಕಾಯ್ದೆಯನ್ನು ಬಲಪಡಿಸುವ ವಿಧೇಯಕವನ್ನು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಮಹತ್ವದ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಹೊಸ ಕಾನೂನಿನ ಪ್ರಕಾರ ಮುಖ್ಯಮಂತ್ರಿ ಕಚೇರಿಯನ್ನೂ ಲೋಕಾಯುಕ್ತ ವ್ಯಾಪ್ತಿಗೆ ಒಳಪಡಿಸಲು ನಿರ್ಧರಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ, ಸಂಪುಟದ ಇತರೆ ಎಲ್ಲ ಸದಸ್ಯರು, ಮುಖ್ಯ ಕಾರ್ಯದರ್ಶಿಯನ್ನು ಒಳಗೊಂಡಂತೆ ಎಲ್ಲ ಹಿರಿಯ ಅಧಿಕಾರಿಗಳು ಹೊಸ ಕಾನೂನಿನ ಪ್ರಕಾರ ಲೋಕಾಯುಕ್ತ ವ್ಯಾಪ್ತಿಗೆ ಬರಲಿದ್ದಾರೆ.

ಈ ಮೂಲಕ ಭ್ರಷ್ಟಾಚಾರಕ್ಕೆ ಮೂಗು ದಾರ ಹಾಕುವ ಮಹತ್ವದ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ವಿಧೇಯಕವನ್ನು ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದರ ಜತೆಗೆ ರಾಜ್ಯದ ಮಹತ್ವದ ನೀರಾವರಿ ಯೋಜನೆಗಳ ಕಾಮಗಾರಿ ಆರಂಭಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಟ ಬೆಳಗಾವಿ, ಗುಲ್ಬರ್ಗ, ತುಮಕೂರು ಹಾಗೂ ಮೈಸೂರಿನಲ್ಲಿ ತಲಾ ರು. 3.4 ಕೋಟಿ ವೆಚ್ಚದಲ್ಲಿ ಸೂಪರ್ ವೆಟರ್ನರಿ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ರು. 8 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ವೆಟರ್ನರಿ ಆಸ್ಪತ್ರೆ ಆರಂಭಕ್ಕೆ ಒಪ್ಪಿಗೆ.

ಟ ಬಿಜಾಪುರ, ತುಮಕೂರು ಹಾಗೂ ಶಿವಮೊಗ್ಗ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ನಗರಸಭೆ ಸದಸ್ಯರನ್ನು ಮಹಾನಗರ ಪಾಲಿಕೆ ಸದಸ್ಯರೆಂದು ಪರಿಗಣಿಸುವುದಕ್ಕೆ ಪೌರಾಡಳಿತ ಕಾಯ್ದೆಗೆ ತಿದ್ದುಪಡಿ ತರುವುದಕ್ಕೆ ಒಪ್ಪಿಗೆ. ಟ ಹಿಂದುಳಿದವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವುದಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧಿನಿಯಮಕ್ಕೆ ತಿದ್ದುಪಡಿ ತರುವುದಕ್ಕೆ ಒಪ್ಪಿಗೆ ನೀಡಲಾಗಿದೆ.

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಗೆ 2,488.97 ಕೋಟಿ ಯೋಜನಾ ವರದಿ ಸಿದ್ಧಕ್ಕೆ ಒಪ್ಪಿಗೆ.
ಶಿವಮೊಗ್ಗ  ಜಿಲ್ಲೆ ಭದ್ರಾವತಿ ತಾಲೂಕಿನ ಗೊಂದಿ ಆಣೆಕಟ್ಟೆ ಬಲದಂಡೆ ಮತ್ತು ಎಡದಂಡೆ ನಾಲೆ ಆಧುನೀಕರಣಕ್ಕೆ 92.82 ಕೋಟಿ ಮೊತ್ತದ ಪರಿಷ್ಕೃತ ಅಂದಾಜು ಯೋಜನೆ ಆರಂಭಕ್ಕೆ ಘಟನೋತ್ತರ ಒಪ್ಪಿಗೆ.

ಹೇಮಾವತಿ ನದಿಯ ತುಮಕೂರು ಶಾಖಾ ನಾಲೆಯಿಂದ ರಾಮನಗರ ಜಿಲ್ಲೆ ಮಾಗಡಿ ತಾಲೂಕು ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುತ್ತರಿದುರ್ಗ ಹೋಬಳಿಯ 83 ಕೆರೆಗಳಿಗೆ ಕುಡಿಯುವ ನೀರು ಒದಗಿಸುವ ರು. 277.50 ಕೋಟಿ ಮೊತ್ತದ ಕಾಮಗಾರಿಗೆ ಒಪ್ಪಿಗೆ.

ನಗರ ಯಶಸ್ವಿನಿ ಯೋಜನೆಯನ್ನು ಏಪ್ರಿಲ್ 1ರಿಂದ ಆರಂಭಿಸುವುದಕ್ಕೆ ಒಪ್ಪಿಗೆ. ನಗರ ಪ್ರದೇಶದಲ್ಲಿ ಬರುವ ಸಹಕಾರ ಸಂಘಗಳ ಸದಸ್ಯರಾದವರು ರು. 1000 ಪ್ರೀಮಿಯಂ ಕಟ್ಟುವ ಮೂಲಕ ಇದರ ಸೌಲಭ್ಯ ಪಡೆದುಕೊಳ್ಳಬಹುದು.  ಚಾಮರಾಜನಗರದ 166 ಹಳ್ಳಿಗಳಿಗೆ ರು. 292.80 ಕೋಟಿ ಹಾಗೂ ಗುಂಡ್ಲುಪೇಟೆಯ 191 ಹಳ್ಳಿಗಳಿಗೆ ನೀರು ಪೂರೈಕೆ ಮಾಡುವುದಕ್ಕೆ 205 ಕೋಟಿ ಮೊತ್ತದ ಪರಿಷ್ಕ್ರತ ಅಂದಾಜು ತಯಾರಿಸುವುದಕ್ಕೆ ಒಪ್ಪಿಗೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಗುಲ್ಬರ್ಗ, ಗದಗ, ಮಡಿಕೇರಿಯಲ್ಲಿ ಹೊಸ ವೈದ್ಯ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಟೆಂಡರ್ ನೀಡಲು ಒಪ್ಪಿಗೆ.

ಬೆಳಗಾವಿ, ಗುಲ್ಬರ್ಗ, ತುಮಕೂರು ಹಾಗೂ ಮೈಸೂರಿನಲ್ಲಿ ತಲಾ ರು. 3.4 ಕೋಟಿ ವೆಚ್ಚದಲ್ಲಿ ಸೂಪರ್ ವೆಟರ್ನರಿ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ರು. 8 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ವೆಟರ್ನರಿ ಆಸ್ಪತ್ರೆ ಆರಂಭಕ್ಕೆ ಒಪ್ಪಿಗೆ. 1,530 ಕೋಟಿ ನಂದವಾಡಗಿ ಏತ ನೀರಾವರಿಗೆ ಯೋಜನಾ ವರದಿ ಸಿದ್ಧತೆಗೆ ನಿಗದಿಗೊಳಿಸಿದ ಮೊತ್ತ , 49 ಕೋಟಿ ಭೀಮಾ ನದಿಯಿಂದ ಇಂಡಿಗೆ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಯೋಜನೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English