ಅಂಬಿಗೆ ಇನ್ನೂ 2 ದಿನ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ

1:22 PM, Monday, February 24th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Ambarishಬೆಂಗಳೂರು: ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ರಾಜ್ಯಾದ್ಯಂತ ವಿಶೇಷ ಪೂಜೆ ಹಾಗೂ ಮೋಮ ನಡೆಸುತ್ತಿದ್ದಾರೆ.

ನಗರದ ವಿಕ್ರಂ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಅಂಬಿಗೆ ಚಿಕಿತ್ಸೆ ಮುಂದುವರೆದಿದ್ದು, ಆಸ್ಪತ್ರೆಯ ಮುಂದೆ ಅವರ ಅಭಿಮಾನಿಗಳು ಇಂದು ಬೆಳಗ್ಗೆಯಿಂದ ಮೃತ್ಯುಂಜಯ ಹಾಗೂ ಧನ್ವಂತರಿ, ಮಹಾಗಣಪತಿ ಮತ್ತು ನವಗ್ರಹ ಹೋಮ ನಡೆಸುತ್ತಿದ್ದಾರೆ.

ಅಂಬಿಗೆ ಇನ್ನೂ 2 ದಿನ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ, ಅಂಬರೀಷ್ ಅವರಿಗೆ ಇನ್ನು ಎರಡು ದಿನ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ರವೀಶ್ ಅವರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಅಂಬಿ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ರವೀಶ್ ಅವರು, ಅಂಬರೀಷ್ ಅವರ ಶ್ವಾಸಕೋಶದಲ್ಲಿ ಸೋಂಕಿದ್ದು, ಈಗ ಶ್ವಾಸಕೋಶದ ಸೋಂಕು ಶೇ. 50ರಷ್ಟು ಗುಣಮುಖವಾಗಿದೆ. ಆದರೂ ಇನ್ನು ನೋವು ಇರುವುದರಿಂದ ಅವರಿಗೆ ನೋವು ಗೊತ್ತಾಗದಂತೆ ಔಷಧಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಉನ್ನತ ಶಿಕ್ಷಣಕ್ಕಾಗಿ ಲಂಡನ್‌ಗೆ ತೆರಳಿದ್ದ ಅಂಬರೀಷ್ ಅವರ ಪುತ್ರ ಅಭಿಷೇಕ್ ಗೌಡ ಅವರು, ತಮ್ಮ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಗರಕ್ಕೆ ಆಗಮಿಸಿದ್ದು, ತಾಯಿ ಸುಮಲತಾ ಅವರೊಂದಿಗೆ ಆಸ್ಪತ್ರೆಗೆ ಭೇಟಿ ತಂದೆಯ ಆರೋಗ್ಯ ವಿಚಾರಿಸಿದರು.

ರೇಲ್ವೆ ಸಚಿವ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ನಟಿ ಹಾಗೂ ವಿಧಾನ ಪರಿಷತ್ ಸದ್ಯಸ್ಯೆ ತಾರಾ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅಂಬಿ ಆರೋಗ್ಯ ವಿಚಾರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English