ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ.
ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ.
ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ ಗಲ್ಲುಶಿಕ್ಷೆಯನ್ನು ಫೆ. 18 ರಂದು ಸುಪ್ರೀಂಕೋರ್ಟ್ ಜೀವಾವಧಿಗೆ ಇಳಿಸಿತ್ತು. ಇದಾದ ಮಾರನೇ ದಿನವೇ ತಮಿಳುನಾಡು ಸರ್ಕಾರ ರಾಜೀವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಏಳೂ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿತ್ತು.
ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸದ್ದ ಕೇಂದ್ರ ಸರ್ಕಾರ ಗುರುವಾರ ಬೆಳಗ್ಗೆಯೇ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿತ್ತು.
Click this button or press Ctrl+G to toggle between Kannada and English