ನವದೆಹಲಿ: ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರದಲ್ಲೇ ಮತದಾನ ಮಾಡಲು ಅವಕಾಶ ನೀಡಬೇಕೆಂದು ಕೋರಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ನಾಲ್ಕು ವಾರಗಳಲ್ಲಿ ಉತ್ತರಿಸುವಂತೆಯೂ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ನೇತೃತ್ವದ ನ್ಯಾಯಪೀಠವು ಸೂಚಿಸಿದೆ. ಮುಂಬರುವ ಚುನಾವಣೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರ ವ್ಯಾಪ್ತಿಯಲ್ಲೇ ಮತದಾನ ಮಾಡಲು ಅವಕಾಶ ನೀಡುವಂತೆ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದರು.
ಈಗಿರುವ ನಿಯಮಗಳ ಪ್ರಕಾರ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರದಲ್ಲಿ ಮತದಾನ ಮಾಡಬೇಕಾದರೆ ಅಲ್ಲಿ ಮೂರು ವರ್ಷ ಸೇವೆ ಸಲ್ಲಿಸಿರಬೇಕೆಂಬ ನಿಯಮ ಇದೆ. ಹೀಗಾಗಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ಮತದಾನ ಹಕ್ಕಿನಿಂದ ವಂಚಿತರಾಗಿದ್ದಾರೆ.
ಈ ಸಮಸ್ಯೆ ಕೇವಲ ಸೇನೆಯಲ್ಲಿರುವವರಿಗೆ ಮಾತ್ರ ಸೀಮಿತವಾಗಿಲ್ಲ. ಸೇನೆಯಲ್ಲಿರುವವರ ಕುಟುಂಬದ ಸದಸ್ಯರೂ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸಂವಿಧಾನದತ್ತವಾಗಿ ದಕ್ಕಿರುವ ಮತದಾನದ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿಲ್ಲ. ಆ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದೂ ಮನವಿಯಲ್ಲಿ ವಿವರಿಸಿದ್ದರು.
Click this button or press Ctrl+G to toggle between Kannada and English