ವಿದ್ಯಾರ್ಥಿನಿಯರಿಗೆ ಉಚಿತ ಕಾಲೇಜು ಶಿಕ್ಷಣ.

12:48 PM, Wednesday, February 26th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

R.V-Deshpandeಬೆಳ್ತಂಗಡಿ: ಉಜಿರೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಉದ್ಘಾಟಿಸಿದರು. ಧರ್ಮಸ್ಥಳದ ಧಮರ್ಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಮಂಗಳೂರು ವಿ.ವಿ. ಕುಲಪತಿ ಡಾ. ಟಿ.ಸಿ. ಶಿವಶಂಕರಮೂರ್ತಿ, ಪ್ರೊ.ಎಸ್. ಪ್ರಭಾಕರ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಯೋಗಾನಂದ ಉಪಸ್ಥಿತರಿದ್ದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪದವಿ ಶಿಕ್ಷಣವನ್ನು ನೀಡಲಾಗುವುದು. ಹುಡುಗಿಯರ ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.

R.V-Deshpande
ಉಜಿರೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ 70 ಲಕ್ಷ ವಿದ್ಯಾರ್ಥಿಗಳಲ್ಲಿ ಕೇವಲ 17 ಲಕ್ಷ ಮಂದಿ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಾರೆ. ಎಲ್ಲರಿಗೂ ಉನ್ನತ ಶಿಕ್ಷಣದ ಅವಕಾಶ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬ್ಯಾಂಕಿನಿಂದ ಸಾಲ ತೆಗೆಸಿಕೊಟ್ಟು ಅದರ ಬಡ್ಡಿಯನ್ನು ಸರ್ಕಾರವೇ ನೀಡಲಿದೆ ಎಂದರು. ಯುವಜನತೆ ರಾಷ್ಟ್ರದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಆರ್ಥಿಕ ಮುಗ್ಗಟ್ಟಿನಿಂದ ಅವರು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೇಳಿದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು, ಗುರು ಹಿರಿಯರಿಗೆ ಗೌರವ ಕೊಡುವುದು ಹಾಗೂ ಬದ್ಧತೆಯೊಂದಿಗೆ ಚಾರಿತ್ರ್ಯ ಸಂಪನ್ನರಾಗಬೇಕು. ನೌಕರಿ ಬೇಟೆಯ ಬದಲು ಸಾಧ್ಯವಾದಷ್ಟು ಸ್ವಯಂ ಉದ್ಯೋಗ ಕೈಗೊಂಡು ಆಥರ್ಿಕ ಪ್ರಗತಿಗೆ ಸಹಕರಿಸಬೇಕು. ಜಾಗತಿಕ ಗ್ರಾಮದ ಕಲ್ಪನೆಯಲ್ಲಿ ಇಂದು ತೀವ್ರ ಸ್ಪರ್ದೆಎದುರಿಸಬೇಕಾಗಿದ್ದು, ಆಧುನಿಕ ಮಾಹಿತಿ ತಂತ್ರಜ್ಞಾನದ ಬಳಕೆಯೊಂದಿಗೆ ಅವಕಾಶಗಳ ಸದುಪಯೋಗ ಪಡೆದು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನೈಪುಣ್ಯ ನಿಧಿ ಯೋಜನೆಯನ್ವಯ ಪ್ರತಿವರ್ಷ 3 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ ಹಾಗೂ ಕೌಶಲ ವೃದ್ಧಿ ಬಗ್ಗೆ ತರಬೇತಿ ನೀಡಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಗ್ರಾಮೀಣ ಪ್ರದೇಶದಲ್ಲಿರುವ ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಪ್ರಗತಿಯನ್ನು ಶ್ಲಾಘಿಸಿದ ಸಚಿವರು ಇದೇ ದೇಶಕ್ಕೆ ಮಾದರಿಯಾದ ಸಂಸ್ಥೆ ಎಂದು ಬಣ್ಣಿಸಿದರು.

ಮಂಗಳೂರು ವಿ.ವಿ. ಕುಲಪತಿ ಡಾ. ಟಿ.ಸಿ. ಶಿವಶಂಕರಮೂರ್ತಿ ಮಾತನಾಡಿ ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವುದರಿಂದ ದೇಶದ ಪ್ರಗತಿಯಾಗುತ್ತದೆ. ಸ್ನಾತಕೋತ್ತರ ಪದವಿ ತರಗತಿಯ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಂಶೋಧನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ವಿದ್ಯಾರ್ಥಿಗಳು ಜ್ಞಾನಾರ್ಜನೆಯೊಂದಿಗೆ ಸೇವಾ ತತ್ಪರತೆಯನ್ನು ಬೆಳಸಿಕೊಳ್ಳಬೇಕು. ಗುಣಮಟ್ಟ ಕಾಪಾಡುವಲ್ಲಿ ಯಾವುದೇ ರೀತಿಯ ರಾಜಿ ಸಲ್ಲದು ಎಂದರು.

ಸ್ತಾನತಕೋತ್ತರ ಅಧ್ಯಯನದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುವುದು ಇದನ್ನು ಮಾದರಿ ಕೇಂದ್ರವಾಗಿ ಬೆಳೆಸಲು ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುವುದು ಎಂದರು.

ಹೇಮಾವತಿ ವಿ. ಹೆಗ್ಗಡೆ, ಪ್ರೊ.ಎಸ್. ಪ್ರಭಾಕರ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಯೋಗಾನಂದ ಉಪಸ್ಥಿತರಿದ್ದರು.

R.V-Deshpande

R.V-Deshpande

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English