ಸಲ್ಮಾನ್ ಖುರ್ಷಿದ್‌ಗೆ ಮಾನಸಿಕ ಸ್ಥಿಮಿತ ಇಲ್ಲ: ಬಿಜೆಪಿ

1:19 PM, Wednesday, February 26th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Narendra-Modiನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಮಾತಿನ ಸಮರ ಆರಂಭವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ಬುಧವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

2002ರ ಗುಜರಾತ್ ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಒಬ್ಬ ‘ನಪುಂಸಕ’ ಎಂದು ಖುರ್ಷಿದ್ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದೆ ಮತ್ತು ಸಲ್ಮಾನ್ ಖುರ್ಷಿದ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಬಿಜೆಪಿ ವಕ್ತಾರ ಶಹನ್ವಾಜ್ ಹುಸೇನ್ ಅವರು, ಕೊಳಕು ಮನಸಿನ ರಾಜಕೀಯ ವಿರೋಧಿಗಳು ಮಾತ್ರ ಇಂತಹ ಪದಗಳನ್ನು ಬಳಸುತ್ತಾರೆ. ಸಲ್ಮಾನ್ ಖುರ್ಷಿದ್ ಅವರ ವಿದೇಶಿ ಶಿಕ್ಷಣ ದೇಶಿ ಮೌಲ್ಯಗಳನ್ನು ಮರೆತಿದೆ ಎಂಬುದನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡುವ ಖುರ್ಷಿದ್ ಅವರು ಇಂತಹ ಕೀಳು ಮಟ್ಟದ ಹೇಳಿಕೆ ನೀಡುವುದು ಸರಿಯೇ? ಎಂದು ಬಿಜೆಪಿ ನಾಯಕ ಪ್ರಶ್ನಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English