ನಳಿನಿ ಸೇರಿದಂತೆ 4 ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

3:27 PM, Thursday, February 27th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Rajeev-Gandhiನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಸೇರಿದಂತೆ ನಾಲ್ವರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಈ ಮುಂಚೆ ಪ್ರಕರಣದ ಮೂವರು ಅಪರಾಧಿಗಳ ಬಿಡುಗಡೆಗೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ಇಂದು ನಳಿನಿ, ರಾಬರ್ಟ್, ಜಯಕುಮಾರ್ ಹಾಗೂ ರವಿಚಂದ್ರನ್   ಬಿಡುಗಡೆಗೂ ತಡೆ ನೀಡಿದೆ.

ಪ್ರಕರಣದ ಏಳು ಹಂತಕರ ಬಿಡುಗಡೆ ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ತಮಿಳುನಾಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಕಳೆದ ವಾರ ಮೂವರು ಬಿಡುಗಡೆಗೆ ತಡೆ ನೀಡಿತ್ತು. ಇದರ ಬೆನ್ನಲ್ಲೆ ಕೇಂದ್ರ ಸರ್ಕಾರ ಉಳಿದ ನಾಲ್ವರು ಬಿಡುಗಡೆಗೂ ಅವಕಾಶ ನೀಡದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿತ್ತು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನಾಯಮೂರ್ತಿ ಪಿ.ಸದಾಶಿವಂ ಅವರು, ಪ್ರಕರಣ ಇತರ ನಾಲ್ವರು ಅಪರಾಧಿಗಳ ಬಿಡುಗಡೆಗೂ ತಡೆ ನೀಡಿ, ಪ್ರಕರಣದ ವಿಚಾರಣೆಯನ್ನು ಮಾರ್ಚ್ 6ಕ್ಕೆ ಮುಂದೂಡಿದ್ದಾರೆ. ಅಲ್ಲದೆ ಈ ಸಂಬಂಧ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.

ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ ಗಲ್ಲುಶಿಕ್ಷೆಯನ್ನು ಫೆ. 18 ರಂದು ಸುಪ್ರೀಂಕೋರ್ಟ್ ಜೀವಾವಧಿಗೆ ಇಳಿಸಿತ್ತು. ಇದಾದ ಮಾರನೇ ದಿನವೇ ತಮಿಳುನಾಡು ಸರ್ಕಾರ ರಾಜೀವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಏಳೂ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English