ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಬಂಧನ

12:24 PM, Friday, February 28th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Subrata-Royನವದೆಹಲಿ: ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತಾ ರಾಯ್ ಅವರನ್ನು ಲಖನೌ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕಳೆದ ಬುಧವಾರ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಲಖನೌ ಪೊಲೀಸರನ್ನು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹೂಡಿಕೆದಾರರಿಗೆ 20 ಸಾವಿರ ಕೋಟಿ ರುಪಾಯಿ ಮರುಪಾವತಿ ಮಾಡದ ಪ್ರಕರಣ ಸಂಬಂಧ ಕೋರ್ಟ್ ಮುಂದೆ ಹಾಜರಾಗುವಲ್ಲಿ ವಿಫಲರಾಗಿದ್ದ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ರಾಯ್‌ರನ್ನು ಬಂಧಿಸಿ ಮಾರ್ಚ್ 4ರ ಮಧ್ಯಾಹ್ನ 2 ಗಂಟೆಗೆ ಕೋರ್ಟ್‌ಗೆ ಹಾಜರುಪಡಿಸಿ ಎಂದು ನ್ಯಾಯಮೂರ್ತಿ ಕೆ.ಎಸ್. ರಾಧಾಕೃಷ್ಣನ್ ಹಾಗೂ ಜೆ.ಎಸ್. ಖೆಹರ್ ಅವರನ್ನೊಳಗೊಂಡ ನ್ಯಾಯಪೀಠ ಪೊಲೀಸರಿಗೆ ಆದೇಶ ನೀಡಿತ್ತು.

ತನ್ನ 92 ವರ್ಷದ ತಾಯಿ ಅನಾರೋಗ್ಯಪೀಡಿತರಾಗಿದ್ದಾರೆ. ಹಾಗಾಗಿ ಖುದ್ದು ಕೋರ್ಟ್‌ಗೆ ಹಾಜರಾಗುವಲ್ಲಿ ವಿನಾಯಿತಿ ನೀಡಬೇಕೆಂದು ಕೋರಿ ರಾಯ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು. ರಾಯ್ ಗೈರುಹಾಜರಿಯ ಕಾರಣಗಳನ್ನು ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರು ವಿವರಿಸಿದರು. ಆದರೂ ಒಪ್ಪದ ಕೋರ್ಟ್, ಇದು ದೇಶದ ಸರ್ವೋಚ್ಚ ನ್ಯಾಯಾಲಯ. ಈ ನ್ಯಾಯಾಲಯದ ಬಾಹುಗಳು ತುಂಬಾ ದೂರದವರೆಗೆ ವಿಸ್ತರಿಸಿದೆ. ನಿನ್ನೆಯೇ ರಾಯ್ ಕೋರಿಕೆಯನ್ನು ತಿರಸ್ಕರಿಸಲಾಗಿದೆ. ಹಾಗಾಗಿ ಅವರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸುತ್ತಿದ್ದೇವೆ ಎಂದಿತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English