ಬೆಂಗಳೂರು : ರಾಜ್ಯಪಾಲರು ಅಕ್ರಮ ಗಣಿಗಾರಿಕೆ ಮತ್ತು ಭೂ ಹಗರಣದ ಕುರಿತು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉತ್ತರ ಸಮಾಧಾನ ತಂದಿಲ್ಲ. ಹಾಗಾಗಿ ಸ್ಪಷ್ಟ ಉತ್ತರಕ್ಕಾಗಿ ಮತ್ತೆ ಪತ್ರ ಬರೆಯುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ.
ಒಂದೆಡೆ ಅಕ್ರಮ ಗಣಿಗಾರಿಕೆ ನಡೆದಿಲ್ಲ ಅಂತಾರೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೋಟಿ, ಕೋಟಿ ಲೂಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳುತ್ತಾರೆ. ಆ ನಿಟ್ಟಿನಲ್ಲಿ ನಾನು ರಾಜ್ಯದ ರಾಜ್ಯಪಾಲನಾಗಿ ಉತ್ಸವ ಮೂರ್ತಿಯಂತಿರಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ನಾನು ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನನ್ನ ಬಗ್ಗೆ ಏನು ಬೇಕಾದರೂ ಟೀಕಿಸಲಿ, ಆ ಬಗ್ಗೆ ತಲೆಕೆಡಿಕೊಳ್ಳುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ.
ಯಡಿಯೂರಪ್ಪ ಅವರ ಕುಟುಂಬದ ಸದಸ್ಯರ ವಿರುದ್ಧ ಕೇಳಿಬಂದಿರುವ ಭೂ ಕಬಳಿಕೆ ಆರೋಪ ಮತ್ತು ಬಳ್ಳಾರಿ ರೆಡ್ಡಿ ಸಹೋದರರ ವಿರುದ್ಧದ ಅಕ್ರಮ ಗಣಿಗಾರಿಕೆ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲರು ಡಿಸೆಂಬರ್ 15ರಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಭಾನುವಾರ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರದಲ್ಲಿ, ಭೂಮಿಯ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ ತಾವು ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಮತ್ತೊಂದು ಪತ್ರದಲ್ಲಿ ಬಳ್ಳಾರಿಯ ರೆಡ್ಡಿ ಸಹೋದರರ ವಿರುದ್ಧದ ಅಕ್ರಮ ಗಣಿಗಾರಿಕೆ ಆರೋಪವನ್ನೂ ತಳ್ಳಿಹಾಕಿದ್ದರು.
Click this button or press Ctrl+G to toggle between Kannada and English