ಬೆಂಗಳೂರು: ಪೀಣ್ಯದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆವರೆಗಿನ ‘ನಮ್ಮ ಮೆಟ್ರೋ’ ಸಂಚಾರಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಬಿಎಂಆರ್ಸಿಎಲ್, ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.
ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಶನಿವಾರ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದ್ದು, ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿನ ಪ್ರಮಾಣ ದರವನ್ನು 2 ರುಪಾಯಿ ಹೆಚ್ಚಿಸಲಾಗಿದೆ.
ಮೆಟ್ರೋ ನೂತನ ದರ ಇಂದಿನಿಂದಲೇ ಜಾರಿಗೆ ಬಂದಿದ್ದು, ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಈ ಮುಂಚೆ 15 ರುಪಾಯಿ ಇದ್ದ ಪ್ರಯಾಣ ದರ ಈಗ 17 ರುಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಎಂ.ಜಿ.ರಸ್ತೆಯಿಂದ ತೆರಳುವ ಪ್ರತಿ ನಿಲ್ದಾಣಕ್ಕು ದರ ಪರಿಷ್ಕರಣೆ ಮಾಡಲಾಗಿದೆ.
Click this button or press Ctrl+G to toggle between Kannada and English