ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷೆಯಾಗಿ ಹಿರಿಯ ನಟಿ ಡಾ. ಜಯಮಾಲ ಅವರು ನೇಮಕವಾಗುವುದು ಬಹುತೇಕ ಖಚಿತವಾಗಿದೆ.
ಜಯಮಾಲ ಅವರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಒಂದೆರಡು ದಿನಗಳಲ್ಲಿ ಸರ್ಕಾರದ ಅಧಿಕೃತ ಅದೇಶ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಬಿಜೆಪಿ ಸರ್ಕಾರ ವಿಧಾನ ಪರಿಷತ್ ಸದಸ್ಯರೂ ಆಗಿರುವ ನಟ ತಾರಾ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ತಾರಾ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಹೀಗಾಗಿ ಕಳೆದ 9 ತಿಂಗಳಿಂದ ಅಕಾಡೆಮಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.
Click this button or press Ctrl+G to toggle between Kannada and English