ಕಾಂಗ್ರೆಸ್‌ನಲ್ಲಿ ವಿಲೀನ ಇಲ್ಲ: ಕೆಸಿಆರ್ ಹೇಳಿಕೆ

12:07 PM, Tuesday, March 4th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Candrasekhara-Raoಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗುವುದಿಲ್ಲ ಎಂದು ಟಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರರಾವ್ ಅವರು ಹೇಳಿದ್ದಾರೆ.

ಹೈದರಾಬಾದ್ ನಲ್ಲಿ ಮಾತನಾಡಿದ ಕೆಸಿಆರ್, ತೆಲಂಗಾಣ ರಾಜ್ಯ ರಚನೆ ನಂತರ ಟಿಆರ್‌ಎಸ್ ಕಾಂಗ್ರೆಸ್ ಪಕ್ಷದಲ್ಲಿ ವಿಲೀನವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗಲು ಉತ್ಸುಕತೆ ತೋರಿದ್ದ ಕೆಸಿಆರ್ ಅವರು, ಪಕ್ಷದಲ್ಲಿನ ಭಿನ್ನಮತ ಮತ್ತು ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಯಿಂದಾಗಿ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ.

ಟಿಆರ್‌ಎಸ್ ಪಕ್ಷದ ವಿರುದ್ಧ ರೆಬೆಲ್ ಆಗಿದ್ದ ಶಾಸಕರನ್ನು ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದ್ದೇ ಕೆಸಿಆರ್ ಅವರ ಬೇಸರಕ್ಕೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿಯೇ ಅವರು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ಒಟ್ಟಾರೆ ಕಳೆದ ಹಲವು ದಿನಗಳಿಂದ ತೆಲಂಗಾಣ ಭಾಗದ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದ್ದ ಕಾಂಗ್ರೆಸ್, ಟಿಆರ್‌ಎಸ್ ವಿಲೀನ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗಿ ತೆಲಂಗಾಣ ಭಾಗದ ಮುಖ್ಯಮಂತ್ರಿಯಾಗಬೇಕೆನ್ನುವ ಕೆ ಚಂದ್ರಶೇಖರರಾವ್ ಅವರ ಕನಸಿನ ಮೇಲೆ ವಿಲೀನ ರದ್ದು ಪ್ರಕ್ರಿಯೆ ಕಾರ್ಮೋಡ ಕಿವಿಯುವ ಸಾಧ್ಯತೆ ಇದೆ ಎಂದು ರಾಜಕೀಯ ಪಂಡಿತರು ಲೆಕ್ಕಹಾಕುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English