ಆಂಧ್ರ ವಿಭಜನೆ ಅಧಿಕೃತ, ಜೂ.2 ತೆಲಂಗಾಣ ಉದಯ ದಿನ

2:30 PM, Wednesday, March 5th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Sampathನವದೆಹಲಿ: ತೆಲಂಗಾಣ ರಾಜ್ಯ ರಚನೆ ಈಗ ಅಧಿಕೃತವಾಗಿದ್ದು, ಜೂ.2 ತೆಲಂಗಾಣ ಉದಯ ದಿನ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರೊಂದಿಗೆ ಭಾರತದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ.

ತೆಲಂಗಾಣ ರಾಜ್ಯ ರಚನೆ ಮಸೂದೆ ರಾಜ್ಯಸಭೆಯಲ್ಲಿ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ, ಮಾರ್ಚ್ 1ರಂದು ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ್ದರು. ಇದಾದ ಬಳಿಕ ನಿನ್ನೆ ತಡರಾತ್ರಿ ಕೇಂದ್ರ ಗೃಹ ಸಚಿವಾಲಯ, ಆಂಧ್ರಪ್ರದೇಶ ವಿಭಜನೆ ಕಾಯ್ದೆ 2014ರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಜೂನ್ 2 ತೆಲಂಗಾಣ ದಿನವನ್ನಾಗಿ ಘೋಷಿಸಿದೆ.

ಈ ಮಧ್ಯೆ ಲೋಕಸಭೆ ಚುನಾವಣೆಯೊಂದಿಗೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ವಿಧಾನಸಭಾ ಚುನಾವಣೆಗೂ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಮೇ 16ರ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ ತೆಲಂಗಾಣದಲ್ಲಿ ನೂತನ ಸರ್ಕಾರ ಅಸ್ಥಿತ್ವಕ್ಕೆ ಬರುವುದು ಖಚಿತವಾಗಿದೆ.

ಲೋಕಸಭೆ ಚುನಾವಣೆಯೊಂದಿಗೆ ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಹಾಗೂ ನೂತನ ರಾಜ್ಯ ತೆಲಂಗಾಣ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭೆಯ ಚುನಾವಣೆಯು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಅವರು ಬುಧವಾರ ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English