- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

Rajiv-gandhi [1]ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು.

1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ತಮಿಳುನಾಡು ಸರ್ಕಾರದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂವಿಧಾನದ ಪ್ರಕಾರ ಜೀವಾವಧಿ ಶಿಕ್ಷೆಗೆ ಗುರಿಯಾದವರನ್ನು ಬಿಡುಗಡೆಗೊಳಿಸುವ ಅಧಿಕಾರ 72 ಮತ್ತು 161 ಆರ್ಟಿಕಲ್ ಅಡಿ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮಾತ್ರ ಇದೇ ಹೊರತು ಮುಖ್ಯಂತ್ರಿಗಳಿಗಲ್ಲ ಎಂದು ಹೇಳಿದ್ದಾರೆ. ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 26ಕ್ಕೆ ಮುಂದೂಡಿದೆ.

ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ ಗಲ್ಲುಶಿಕ್ಷೆಯನ್ನು ಫೆ. 18 ರಂದು ಸುಪ್ರೀಂಕೋರ್ಟ್ ಜೀವಾವಧಿಗೆ ಇಳಿಸಿತ್ತು. ಇದಾದ ಮಾರನೇ ದಿನವೇ ತಮಿಳುನಾಡು ಸರ್ಕಾರ ರಾಜೀವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಏಳೂ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಂಡಿತ್ತು.