ನವದೆಹಲಿ: ನಾನು ಬಿಜೆಪಿ ಸೇರುವುದಕ್ಕೆ ಸುಷ್ಮಾ ಸ್ವರಾಜ್ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಿನ್ನೆ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಹೇಳಿದ ಮಾತು ಎಷ್ಟರ ಮಟ್ಟಿಗೆ ನಿಜ ಎಂಬ ಗೊಂದಲ ಮೂಡಿದೆ.
ಬಿ.ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದಿರುವ ಬೆನ್ನಲ್ಲೇ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಬಿಎಸ್ಆರ್ ಪಕ್ಷ ಮತ್ತು ಬಿಜೆಪಿ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬಿ.ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಮತ್ತು ಬಿಜೆಪಿ ವಿಲೀನಕ್ಕೆ ನನ್ನ ವಿರೋಧವಿದೆ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ನಾನು ಬಿಜೆಪಿ ಸೇರುವುದಕ್ಕೆ ಸುಷ್ಮಾ ಸ್ವರಾಜ್ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದರು. ಆದರೆ ಇಂದು ಸುಷ್ಮಾ ಸ್ವರಾಜ್ ಶ್ರೀರಾಮುಲು ಬಿಜೆಪಿಗೆ ಸೇರ್ಪಡೆಗೆ ನನ್ನ ಆಕ್ಷೇಪವಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸುಷ್ಮಾ ಅವರ ಈ ಹೇಳಿಕೆ ಅನೇಕ ಗೊಂದಲಗಳನ್ನು ಮೂಡಿಸಿದೆ. ಇತ್ತ ರಾಜ್ಯದಲ್ಲಿ ಶ್ರೀರಾಮುಲು ಸುಷ್ಮಾ ಒಪ್ಪಿದ್ದಾರೆ ಎಂದು ಹೇಳುತ್ತಿದ್ದರೇ, ಅತ್ತ ಸುಷ್ಮಾ ವಿಲೀನಕ್ಕೆ ಸಮ್ಮತಿ ಇಲ್ಲ ಎಂದು ಹೇಳುತ್ತಿದ್ದಾರೆ.
Click this button or press Ctrl+G to toggle between Kannada and English