ಬೆಂಗಳೂರು : ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಶ್ ಅವರ ಅರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದ್ದು ಕಳೆದ 15 ದಿನಗಳ ಬಳಿಕ ಇದೇ ಮೊದಲ ಬಾರಿ ಕುಟುಂಬ ಸದಸ್ಯರೊಡನೆ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.
ಅಂಬರೀಶ್ ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರನ್ನು ನಿನ್ನೆ ತೆಗೆದಿದ್ದು ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡು ಬಂದಿದೆ ಹೀಗಾಗಿ ಇನ್ನೆರಡು ದಿನಗಳಲ್ಲಿ ಸಾಮಾನ್ಯ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ .
ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಅಂಬರೀಶ್ ಅಪ್ತಮಿತ್ರರಾಗಿರುವ ನಟ ಅರ್ಜುನ್ ಸರ್ಜಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಅಂಬರೀಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್1ರ ಶನಿವಾರ ಮುಂಜಾನೆ ವಿಶೇಷ ಏರ್ ಆಂಬ್ಯುಲೆನ್ಸ್‌ನಲ್ಲಿ ಸಿಂಗಾಪುರಕ್ಕೆ ಕರೆದೊಯ್ದು, ಅಲ್ಲಿನ ಮೌಂಟ್ ಎಲಿಜಬತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Click this button or press Ctrl+G to toggle between Kannada and English