ನಂದನ್ ನಿಲೇಕಣಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

12:22 PM, Monday, March 10th, 2014
Share
1 Star2 Stars3 Stars4 Stars5 Stars
(No Ratings Yet)
Loading...

Nandan-Nilekaniಬೆಂಗಳೂರು: ‘ಆಧಾರ್‌’ ವಿಶೇಷ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಅವರು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಿಲೇಕಣಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಸಚಿವರು ಹಾಗೂ ಶಾಸಕರು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ನಿಲೇಕಣಿ ಅವರಿಗೆ ಕಾಂಗ್ರೆಸ್ ಟಿಕೆಟ್ ಖಚಿತವಾಗಿದ್ದು, ಈ ತಿಂಗಳ ಅಂತ್ಯಕ್ಕೆ ಅವರು ಆಧಾರ್ ಮುಖ್ಯಸ್ಥ ಸ್ಥಾನಕ್ಕೆ ರಾಜಿನಾಮೆ ನೀಡಿ, ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ನಿಲೇಕಣಿ ಅವರಿಗೆ ಕೇಂದ್ರ ಸರ್ಕಾರ ವಿಶಿಷ್ಟ ಪ್ರಾಧಿಕಾರ ಸಂಖ್ಯೆ ನೀಡುವ ಸಂಸ್ಥೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿತ್ತು. ಇದು ಕೇಂದ್ರ ಕ್ಯಾಬಿನೆಟ್ ಸಚಿವರ ಸಮಾನ ಹುದ್ದೆಯನ್ನು ಹೊಂದಿದ್ದು, ದೇಶದ ಎಲ್ಲರಿಗೂ ಆಧಾರ್ ಕಾರ್ಡ್ ನೀಡಲು ಈ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English