ಬೆಂಗಳೂರು: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಮಾತೃ ಪಕ್ಷಕ್ಕೆ ಮರುಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಡೆಗೂ ತಮ್ಮ ಬೆಂಬಲಿಗರ ಬಂಡಾಯಕ್ಕೆ ಮಣಿದು, ಅತಂತ್ರವಾಗಿರುವ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಪತ್ರದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ.
ಇತ್ತೀಚಿಗಷ್ಟೆ ಯಡಿಯೂರಪ್ಪ ಅವರ ಕೆಲವು ಬೆಂಬಲಿಗರನ್ನು ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ, ಅವರ ವಿರುದ್ಧವೇ ಬಂಡಾಯವೆದ್ದಿದ್ದರು.
Click this button or press Ctrl+G to toggle between Kannada and English