- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಂಬಲಿಗರ ಬಂಡಾಯಕ್ಕೆ ಮಣಿದ ಬಿಎಸ್‌ವೈ, ರಾಜನಾಥ್ ಸಿಂಗ್‌ಗೆ ಪತ್ರ

Yaddyurappa [1]ಬೆಂಗಳೂರು: ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಮಾತೃ ಪಕ್ಷಕ್ಕೆ ಮರುಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಡೆಗೂ ತಮ್ಮ ಬೆಂಬಲಿಗರ ಬಂಡಾಯಕ್ಕೆ ಮಣಿದು, ಅತಂತ್ರವಾಗಿರುವ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಪತ್ರದಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿಗಷ್ಟೆ ಯಡಿಯೂರಪ್ಪ ಅವರ ಕೆಲವು ಬೆಂಬಲಿಗರನ್ನು ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ, ಅವರ ವಿರುದ್ಧವೇ ಬಂಡಾಯವೆದ್ದಿದ್ದರು.