ಮಂಗನಕಾಯಿಲೆ ನಿಯಂತ್ರಣಕ್ಕೆ ಕ್ರಮ : ಸಚಿವ ಯು.ಟಿ.ಖಾದರ್

9:05 PM, Tuesday, March 18th, 2014
Share
1 Star2 Stars3 Stars4 Stars5 Stars
(No Ratings Yet)
Loading...
ut khader

ಶಿವಮೊಗ್ಗ : ಇತ್ತೀಚೆಗೆ ರಾಜ್ಯದ ನಾಲ್ಕಾರು ಜಿಲ್ಲೆಗಳಲ್ಲಿ ಕಂಡುಬಂದಿರುವ ಮಂಗನಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದರು.

ಅವರು ಸೋಮವಾರ ತೀರ್ಥಹಳ್ಳಿಯ ತಾಲೂಕು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಕಾಯಿಲೆಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ವಿಶೇಷವಾಗಿ ಈ ಕಾಯಿಲೆಯು ಅರಣ್ಯಗಳಲ್ಲಿ ವಾಸಿಸುವ ವನವಾಸಿಗಳಲ್ಲೇ ಕಂಡುಬರುತ್ತಿರುವುದರಿಂದ ಮಲೆನಾಡಿನ ಅರಣ್ಯ ಪ್ರದೇಶಗಳಲ್ಲಿವಾಸಿಸುವ ಹಾಗೂ ಕಾಯಿಲೆ ಪೀಡಿತರಿಗೆ ತ್ವರಿತಗತಿಯಲ್ಲಿ ಆರೋಗ್ಯ ಸೇವೆ ಒದಗಿಸಲು ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂಧಿಗಳು ಅಗತ್ಯ ಸಹಕಾರ ನೀಡುವಂತೆ ಕೋರಿದರು. ಆರೋಗ್ಯ ಇಲಾಖೆಯಲ್ಲಿ ಈಗಿರುವ ಆರೋಗ್ಯ ಸೇವಾ ವ್ಯವಸ್ಥೆಯನ್ನು ಹಲವು ತಜ್ಞರ ಸಲಹೆ ಪಡೆದು, ಕೆಲವು ಬದಲಾವಣೆಗಳೊಂದಿಗೆ ಪುನರ್ ಮಾರ್ಪಡಿಸಿ, ಅನುಷ್ಠಾನಗೊಳಿಸಲಾಗುವುದು ಎಂದರು.

ಆಗಾಗ್ಗೆ ಕಂಡುಬರುವ ಮಲೇರಿಯಾ ಹಾಗೂ ಡೇಂಗ್ಯೂನಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ಕಸವಿಲೇವಾರಿ ಮತ್ತು ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ. ಈ ಸಂಬಂಧ ನಗರಸಭೆ ಮತ್ತು ಪಾಲಿಕೆಗಳಿಗೆ ಸ್ಚಚ್ಚತಾಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ ಎಂದ ಅವರು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಎಲ್ಲಾ ನೀರಿನ ಟ್ಯಾಂಕ್ಗಳ ಸ್ವಚ್ಚಗೊಳಿಸಿಕೊಳ್ಳಲು ಸೂಚಿಸಲಾಗಿದೆ ಎಂದರು.

ನಂತರ ಸಚಿವರು ತೀರ್ಥಹಳ್ಳಿ ತಾಲೂಕಿನ ಕನ್ನಂಗಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಶಿಲಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English