- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Shoba Karandlaje [1]

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್‌ ಅವರಿಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಬಿಜೆಪಿಯ ಕಾರ್ಕಳ ಶಾಸಕರಾದ ಸುನಿಲ್‌ ಕುಮಾರ್‌,ಚಿಕ್ಕಮಗಳೂರು ಶಾಸಕ ಸಿಟಿ ರವಿ , ತರಿಕೆರೆಯ ಮಾಜಿ ಶಾಸಕ ಸುರೇಶ್‌ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಪಸ್ಥಿತರಿದ್ದರು.