ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಇರುವೈಲು ಚಂದ್ರಹಾಸ ಶೆಟ್ಟಿ, ಶುಕ್ರವಾರ ತನ್ನ ನಾಮಪತ್ರವನ್ನು ಹಿಂದೆಗೆದುಕೊಂಡಿದ್ದಾರೆ.
ಮಂಗಳೂರಿನಲ್ಲಿ ಒಟ್ಟು 17 ಮಂದಿ ಸಲ್ಲಿಸಿದ ನಾಮಪತ್ರಗಳು ಸಿಂಧುಗೊಂಡಿದ್ದವು. ಇದೀಗ ಓರ್ವ ಅಭ್ಯರ್ಥಿ ಹಿಂದೆಗೆದುಕೊಂಡಿರುವುದರಿಂದ 16 ಮಂದಿ ಸ್ಪರ್ಧಾಕಣದಲ್ಲಿದ್ದಾರೆ. ಒಟ್ಟು 10 ಮಂದಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರಗಳನ್ನು ಸಲ್ಲಿಸಿದ್ದು ಇದು 9ಕ್ಕೆ ಇಳಿದಿದೆ.
ನಾಮಪತ್ರಗಳನ್ನು ವಾಪಸ್ ಪಡೆದುಕೊಳ್ಳಲು ಮಾ. 29 ಕೊನೆ ದಿನ. ಸಂಜೆ 4 ಗಂಟೆಗೆ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಎ.ಬಿ. ಇಬ್ರಾಹಿಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಹಿಂದೆಗೆತವಾಗಿಲ್ಲ. 14 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ಎಲ್ಲ ನಾಮಪತ್ರಗಳೂ ಸಕ್ರಮವಾಗಿದ್ದವು. ನಾಮಪತ್ರ ಹಿಂದೆಗೆದುಕೊಳ್ಳಲು ಮಾ. 29 ಕೊನೆಯ ದಿನ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ಮುದ್ದುಮೋಹನ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English