ಪತ್ರಕರ್ತರಿಗೆ ಅಂಚೆ ಮತ ಸೌಲಭ್ಯ ಒದಗಿಸುವಂತೆ ಮನವಿ

3:20 PM, Thursday, April 3rd, 2014
Share
1 Star2 Stars3 Stars4 Stars5 Stars
(No Ratings Yet)
Loading...
Press Club

ಮಂಗಳೂರು : ಪತ್ರಕರ್ತರಿಗೆ ಅಂಚೆ ಮತ ಅಥವಾ ಚುನಾವಣಾ ಕರ್ತವ್ಯ ದೃಢಪತ್ರದ (ಇಡಿಸಿ) ಸೌಲಭ್ಯ ಒದಗಿಸುವಂತೆ ಕೋರಿ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ. ಕ. ಚುನಾವಣಾಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ಬುಧವಾರ ಮನವಿ ನೀಡಲಾಯಿತು.

ದ. ಕ. ಜಿಲ್ಲೆಯಲ್ಲಿ ನಕ್ಸಲ್‌ ಪೀಡಿತ ಪ್ರದೇಶವಿರುವುದರಿಂದ ಗ್ರಾಮೀಣ ಪ್ರದೇಶಗಳಿಗೆ ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡುವ ಅವಶ್ಯಕತೆ ಇರುತ್ತದೆ. ಚುನಾವಣೆ ದಿನದಂದು ಪತ್ರಕರ್ತರು ಬೆಳಗ್ಗಿನಿಂದ ರಾತ್ರಿ ವರೆಗೆ ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆ ಮೂಲಕ ಜಿಲ್ಲಾ ಚುನಾವಣಾ ಅಧಿಕಾರಿ ಅವರಿಂದ ಅಧಿಕೃತವಾಗಿ ಚುನಾವಣಾ ಕರ್ತವ್ಯದ ಗುರುತಿನ ಚೀಟಿ ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಚುನಾವಣಾ ಕರ್ತವ್ಯ ದೃಢಪತ್ರದ ಮೂಲಕ ಮತದಾನ ಮಾಡಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಂಘದ ಅಧ್ಯಕ್ಷ ಪಿ.ಬಿ. ಹರೀಶ್‌ ರೈ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಉಪಾಧ್ಯಕ್ಷ ವೆಂಕಟೇಶ್‌ ಬಂಟ್ವಾಳ್‌, ಅನಿಲ್‌ ಜೋಗಿ, ದಯಾನಂದ ಕುಕ್ಕಾಜೆ ಮೊದಲಾದವರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English