ಎಸ್‌. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ವಿಧಿ ವಶ

5:52 PM, Tuesday, April 22nd, 2014
Share
1 Star2 Stars3 Stars4 Stars5 Stars
(5 rating, 4 votes)
Loading...
shakunthala Bangarappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಕುಂತಲಾ ಬಂಗಾರಪ್ಪ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಮಧ್ಯಾಹ್ನ 3.40ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಪುತ್ರರಾದ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ, ಪುತ್ರಿ ಗೀತಾ ಶಿವರಾಜ್ ಕುಮಾರ್ ಮುಂತಾದ ಕುಟುಂಬ ಸದಸ್ಯರನ್ನು ಶಕುಂತಲಾ ಬಂಗಾರಪ್ಪ ಅಗಲಿದ್ದಾರೆ. ಶಿವಮೊಗ್ಗ ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಶಕುಂತಲಾ ಬಂಗಾರಪ್ಪ ಏ.11ರಂದು ಪ್ರಚಾರ ನಡೆಸಿದ್ದರು.

ಮಂಗಳವಾರ ಸಂಜೆ ಸದಾಶಿವನಗರದಲ್ಲಿರುವ ಎಸ್.ಬಂಗಾರಪ್ಪ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಶಿವಮೊಗ್ಗ ಜಿಲ್ಲೆಯ ಸೊರಬದ ಬಂಗಾರಧಾಮದಲ್ಲಿ ಶಕುಂತಲಾ ಬಂಗಾರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ಎಸ್.ಬಂಗಾರಪ್ಪ ಅವರ ಅಂತ್ಯಕ್ರಿಯೆಯು ಇಲ್ಲಿಯೇ ನಡೆದಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English