ಮಂಗಳೂರು : ಶೃಂಗೇರಿ ಚೆಕ್ ಪೋಸ್ಟ್ ಬಳಿ ಎಎನ್ ಎಫ್ ಗುಂಡೇಟಿಗೆ ಬಲಿಯಾದ ಕಬೀರ್ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ ನೀಡುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. ಕಬೀರ್ ಕುಟುಂಬ ಆರ್ಥಿಕವಾಗಿ ಹಿಂದುಳಿದಿರುವುದರಿಂದ ಆತನ ತಾಯಿಯ ಹೆಸರಿನಲ್ಲಿ ಬ್ಯಾಂಕ್ ಖಾತೆಯ ಮೂಲಕ ಸುರತ್ಕ್ ಲ್ ನಲ್ಲಿ ನಿಧಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಮೊಯ್ದಿನ್ ಬಾವ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಪ್ರಕರಣಕ್ಕೆ ಕೋಮು ಹಾಗೂ ರಾಜಕೀಯ ಬಣ್ಣ ಹಚ್ಚದೆ ಮಾನವೀಯತೆ ದೃಷ್ಟಿಯಿಂದ ನೋಡಬೇಕೆಂದು ಹೇಳಿದರು. ಸರಕಾರ ಮೃತ ಕುಟುಂಬಕ್ಕೆ ಘೋಷಿಸಿದ ಪರಿಹಾರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ನಕ್ಸಲ್ ನಿಗ್ರಹ ದಳದ ಸಿಬ್ಬಂದಿ ನವೀನ ನಾಯಕ್ ವಿರುದ್ಧ ಸೆಕ್ಷನ್ 302, 341, 504, ಮತ್ತು 295 ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಟಿ.ಕೆ. ಸುಧೀರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English