ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಮಂಗಳೂರು ನಗರ ಪೊಲೀಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಆಯೋಜಿಸಿದ 22ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಮಾಹೆ ವಿಶ್ವ ವಿದ್ಯಾ ನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎಂ.ಹೆಗ್ಡೆ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಕುಲಪತಿಗಳಾದ ಡಾ.ಬಿ.ಎಂ.ಹೆಗ್ಡೆ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಅಫಘಾತಗಳನ್ನು ಕಡಿಮೆ ಮಾಡಬಹುದು, ವಿದ್ಯಾರ್ಥಿಗಳಿಗೆ ಈ ಬಗ್ಗೆ ಶಾಲೆಯಲ್ಲಿ ಶಿಕ್ಷಣ ನೀಡುವುದರಿಂದಲೂ ಅಫಘಾತಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬಹುದು ಎಂದರು.
ಮೂಡದ ಅಧ್ಯಕ್ಷ ರಾದ ಡಾ. ಮಾಧವ ಭಂಡಾರಿ,ಮುಖ್ಯ ಅತಿಥಿಗಳಾಗಿದ್ದರು. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಿಲ್ಲಾ ಎಸ್ಪಿ ಡಾ.ಎ. ಸುಬ್ರಮಣ್ಯೇಶ್ವರ ರಾವ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೇವಾ ನಾಯಕ್, ಡಿಸಿಪಿ ಮುತ್ತೂರಾಯ, ದ.ಕ. ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿಗಳಾದ ಅಜೀಜ್ ಪರ್ತಿಪಾಡಿ ಮತ್ತಿರರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English
November 21st, 2011 at 17:58:26
MLE2B5 xypjafsnzsvw, [url=http://alwlkyuvlvpu.com/]alwlkyuvlvpu[/url], [link=http://ohutddaujamm.com/]ohutddaujamm[/link], http://sjbjtoqedghu.com/