ಮಂಗಳೂರು : ಬೆಳ್ತಂಗಡಿ ತಾಲೂಕಿನ ಕುಗ್ರಾಮ ಬಾಂಜಾರುಮಲೆಯಲ್ಲಿ ಮೊಬೈಲ್ ಟವರ್ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಬಿ.ಎಸ್.ಎನ್.ಎಲ್. ಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಬಿ.ಎಸ್.ಎನ್.ಎಲ್. ಜನರಲ್ ಮೆನೇಜರ್ಗೆ ಪತ್ರ ಬರೆದಿರುವ ಅವರು, ಸುಮಾರು 42 ಮಲೆಕುಡಿಯ ಕುಟುಂಬಗಳು ಈ ಕುಗ್ರಾಮದಲ್ಲಿ ವಾಸಿಸುತ್ತಿದ್ದು, ಸಂಪರ್ಕ ಮತ್ತು ಸಾರಿಗೆ ವ್ಯವಸ್ಥೆ ಸೇರಿದಂತೆ ಕನಿಷ್ಠ ಮೂಲಸೌಕರ್ಯಗಳು ಇಲ್ಲದಿರುವುದು ಇಲ್ಲಿನ ಸಮಸ್ಯೆಯಾಗಿದೆ. ಈಗಾಗಲೇ ಗ್ರಾಮದಲ್ಲಿ ರಸ್ತೆ, ವಿದ್ಯುತ್, ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೊಬೈಲ್ ಟವರ್ ಅಳವಡಿಕೆಯಿಂದ ಬಾಂಜಾರುಮಲೆಗೆಹೊರಜಗತ್ತಿನ ಸಂಪರ್ಕ ಸುಲಭವಾಗಲಿದ್ದು, ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಮೊಬೈಲ್ ಟವರ್ ಅಳವಡಿಕೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಬಿ.ಎಸ್.ಎನ್.ಎಲ್..ಗೆ ಸೂಚಿಸಿದ್ದಾರೆ.
Click this button or press Ctrl+G to toggle between Kannada and English