ಬಂಟ್ವಾಳ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪಾರಿಣಾಮದ ಬಗ್ಗೆ ಯುವ ಸಮುದಾಯದಲ್ಲಿ ಸ್ವಯಂ ಜಾಗೃತಿ ಮೂಡಿದರೆ ಮಾತ್ರ ಈ ದುಷ್ಚಟವನ್ನು ನಿರ್ಮೂಲನ ಮಾಡಲು ಸಾಧ್ಯ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರಶ್ಮಿ ಪರಡಿ ಹೇಳಿದರು.
ಅವರು ಗುರುವಾರ ಬಂಟ್ವಾಳ ನಗರ ಪೊಲೀಸ್ ಠಾಣೆಯ ವತಿಯಿಂದ ಮೊಡಂಕಾಪುವಿನ ಕಾರ್ಮೆಲ್ ಕಾನ್ವೆಂಟ್ ಪದವಿ ಕಾಲೇಜಿನಲ್ಲಿ ವಿಶ್ವ ಮಾಧಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಗರ ಠಾಣಾ ಎಸೈ ನಂದಕುಮಾರ್ ಮಾತನಾಡಿ ಮಾದಕ ವ್ಯಸನ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ಕೆಲವು ಬಾರಿ ನಮ್ಮ ಕಣ್ತಪ್ಪಿಸಿಯೂ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಜಾಲ ನಡೆಯುತ್ತಿರುತ್ತದೆ. ಈ ಬಗ್ಗೆ ನಿಮ್ಮ ಗಮನಕ್ಕೆ ಬಂದರೆ ತಕ್ಷಣ ಪೊಲೀಸ್ ಠಾಣೆಗೆ ತಿಳಿಸಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಎಚ್.ಎಸ್. ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಡ್ಸ್ ಸಂಸ್ಥೆಯ ವಿರೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಉಪನಿರೀಕ್ಷಕಿ ಸೇಸಮ್ಮ ಮಾತನಾಡಿದರು. ಗುಪ್ತಚರ ಇಲಾಖೆಯ ಸಿಬ್ಬಂದಿ ಶ್ರೀಧರ್ ಸ್ವಾಗತಿಸಿ,ನಿರೂಪಿಸಿದರು. ಕಾಲೇಜು ವಿದ್ಯಾರ್ಥಿನಿ ರೆನಿಟಾ ವಾಸ್ ವಂದಿಸಿದರು.
Click this button or press Ctrl+G to toggle between Kannada and English