ಬಲಿಷ್ಟ ಭಾರತದ ನಿರ್ಮಾಣದ ಬಜೆಟ್ : ಸಂಸದ ನಳಿನ್

11:44 PM, Thursday, July 10th, 2014
Share
1 Star2 Stars3 Stars4 Stars5 Stars
(5 rating, 6 votes)
Loading...
Nalin kumar

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿತ್ವದ, ಅಭಿವೃದ್ಧಿಶೀಲ, ಬಲಿಷ್ಟ ಭಾರತದ ನಿರ್ಮಾಣಕ್ಕೆ ಪೂರಕವಾದ ಬಜೆಟನ್ನು ಸಚಿವ ಅರುಣ್ ಜೆಟ್ಲಿ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಜನಸಾಮಾನ್ಯರ ಜೀವನಕ್ಕೆ ಪೂರಕವಾದ ಅಂಶಗಳನ್ನು ಗಮನಿಸಿ, ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ಬಟ್ಟೆಬರೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲಾಗಿದೆ. ವೇತನ ವರ್ಗದವರಿಗೆ ಆದಾಯ ಮಿತಿ 2.50ಲಕ್ಷಗೆ ವಿಸ್ತರಿಸಲಾಗಿದೆ. ಕೃಷಿ ಉತ್ತೇಜನ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಎಲ್ಲಾ ಮನೆಗಳಿಗೆ ಶೌಚಾಲಯ ಸೇರಿದಂತೆ ಹಲವು ಜನಪರ ಯೋಜನೆಗಳು ಬಜೆಟ್ನಲ್ಲಿ ಸೇರಿವೆ. ನದಿ ಜೋಡಣೆ, ಧಾರ್ಮಿಕ ಕ್ಷೇತ್ರದ ಅಭಿವೃದ್ದಿ, ದೇಶದಲ್ಲಿ 100ಸ್ಮಾರ್ಟ್ ಸಿಟಿಗಳಅಭಿವೃದ್ದಿಗೆ ಬಜೆಟ್ನಲ್ಲಿ ಹಣ ಮೀಸಲಿಟ್ಟಿದ್ದು, ಮಂಗಳೂರು ಇದರಲ್ಲಿ ಸೇರುವ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಅಭಿವೃದ್ಧಿಪರ, ದೂರದೃಷ್ಠಿತ್ವದ, ಉತ್ತಮ ಬಜೆಟ್ ಆಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English