ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ ಪ್ರಾರಂಭ

12:03 AM, Thursday, July 17th, 2014
Share
1 Star2 Stars3 Stars4 Stars5 Stars
(5 rating, 4 votes)
Loading...
Dharmasthala

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಬುಧವಾರದಿಂದ ಎರಡು ತಿಂಗಳ ಕಾಲ ನಡೆಯಲಿರುವ ಪುರಾಣ ವಾಚನ-ಪ್ರವಚನ ಎಂಬ ಸತ್ಸಂಗ ಕಾರ್ಯಕ್ರಮಕ್ಕೆ ವಾಚನ-ಪ್ರವಚನಕಾರರು, ಕ್ಷೇತ್ರದ ಭಕ್ತಾದಿಗಳ ಸಮ್ಮುಖದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಮಂಗಳೂರಿನ ಉದ್ಯಮಿ ರಾಜವರ್ಮ ಬಳ್ಳಾಲ್ ಉಪಸ್ಥಿತರಿದ್ದರು.

ಪ್ರತಿದಿನ ಸಂಜೆ ಗಂಟೆ 6.30 ರಿಂದ 8 ರ ವರೆಗೆ ದೇವಸ್ಥಾನದ ಎದುರುಗಡೆ ಇರುವ ಪ್ರವಚನ ಮಂಟಪದಲ್ಲಿ ಶ್ರೀ ಕುಮಾರ ವ್ಯಾಸ ವಿರಚಿತ ಕರ್ಣಾಟ ಭಾರತ ಮಂಜರಿ ಯ ವಾಚನ – ಪ್ರವಚನ ನಡೆಯಲಿದೆ.

ಬುಧವಾರ ದಿವಾಕರ ಆಚಾರ್ಯ ವಾಚನ ಮಾಡಿದರೆ, ಡಾ. ಈ. ಮಹಾಬಲ ಭಟ್ ಪ್ರವಚನ ನೀಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English