ಮುಂಬಯಿ : ಸಾಂತಕ್ರೂಜ್ ಪೂರ್ವದಲ್ಲಿನ ಪೇಜಾವರ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿರುವ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಕಳೆದ ಸೋಮವಾರ ತೆಂಕಣದ ಗಾನಗಾಪುರ ಎಂದೇ ಜನಜನಿತ ಕರ್ನಾಟಕ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಗುರು ವೀರಾಂಜನೆಯ ಸ್ವಾಮಿ ಕ್ಷೇತ್ರ ಒಡಿಯೂರುಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಸೌಹಾರ್ದ ಭೇಟಿಯನ್ನೀಡಿದರು.
ಉಭಯ ಸ್ವಾಮೀಜಿಗಳು ಪರಸ್ಪರ ಗೌರವಾರ್ಪಣೆಗೈದು ಮುಂಬಯಿ ಪ್ರವಾಸದ ಬಗ್ಗೆ ವಿಚಾರ ವಿನಿಮಯ ನಡೆಸಿಕೊಂಡರು. ಈ ಸಂದರ್ಭದಲ್ಲಿ ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English