ಫೆಬ್ರುವರಿ 24ರಂದು ರಾಜ್ಯದ ಮುಂಗಡ ಪತ್ರ ಮಂಡನೆ

10:11 PM, Thursday, February 3rd, 2011
Share
1 Star2 Stars3 Stars4 Stars5 Stars
(No Ratings Yet)
Loading...

VS Acharyaಬೆಂಗಳೂರು : ಇಂದು ನಡೆದ  ಸಚಿವ ಸಂಪುಟದ ಸಭೆಯಲ್ಲಿ ಪ್ರಸಕ್ತ ಸಾಲಿನ ಮುಂಗಡ ಪತ್ರ ಮಂಡನೆಯ ಬಗ್ಗೆ ಚರ್ಚೆ ನಡೆದಿದ್ದು, ಅದರಂತೆ ಫೆಬ್ರುವರಿ 24ರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಲಿದ್ದಾರೆ ಎಂದು ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ,  15 ದಿನಗಳ ಕಾಲ ಬಜೆಟ್ ಅಧಿವೇಶನ ನಡೆಯಲಿದೆ.  ಲೋಕಾಯುಕ್ತ ಸಿಬ್ಬಂದಿ ವೇತನ ಶೇ.10ರಷ್ಟು ಏರಿಕೆ, ರಾಜ್ಯದಲ್ಲಿರುವ ಸುಮಾರು 1.5 ಲಕ್ಷ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಗಡಿನಾಡ ಅಭಿವೃದ್ಧಿಗೆ ಹತ್ತು ಕೋಟಿ ರೂಪಾಯಿ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಮಂಡನೆಯೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರನೇ ಬಾರಿ ಮುಂಗಡ ಪತ್ರ ಮಂಡಿಸಿದಂತಾಗಿದೆ. ಈ ಬಾರಿಯ ಬಜೆಟ್ ರೈತ ಸ್ನೇಹಿ ಹಾಗೂ ಜನಪರವಾಗಲಿದೆ ಎಂದು ಇತ್ತೀಚೆಗಷ್ಟೇ ಮುಖ್ಯಮಂತ್ರಿಗಳು ತಿಳಿಸಿದ್ದರು. ಅಷ್ಟೇ ಅಲ್ಲ ರೈತರ ಅಭಿವೃದ್ಧಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಅನ್ನು ಮಂಡಿಸುವುದಾಗಿಯೂ ಅವರು ಹೇಳಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English