ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ನೂತನ ಮೇಯರ್ ಆಗಿ ಮೂಡಲಪಾಳ್ಯ ಕಾರ್ಪೊರೇಟರ್ ಎನ್. ಶಾಂತಕುಮಾರಿ ಹಾಗೂ ಉಪ ಮೇಯರ್ ಆಗಿ ಕಾಮಾಕ್ಷಿಪಾಳ್ಯ ಕಾರ್ಪೊರೇಟರ್ ಕೆ.ರಂಗಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಬಿಎಂಪಿಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಶಾಂತಕುಮಾರಿ ಹಾಗೂ ಉಪ ಮೇಯರ್ ಸ್ಥಾನಕ್ಕೆ ರಂಗಣ್ಣ ಅವರು ಬೆಳಗ್ಗೆ ನಾಮಪತ್ರ ಸಲ್ಲಿಸಿದ್ದರು. ಬೆಳಗ್ಗೆ 9ರಿಂದ 11 ಗಂಟೆಯವರೆಗ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಿತು. 1 ಗಂಟೆಯವರೆಗೆ ನಾಮಪತ್ರ ಪರಿಶೀಲನೆ ನಡೆಯಿತು. ಆದರೆ ಒಂದು ಹುದ್ದೆಗೆ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಪ್ರಾದೇಶಿಕ ಆಯುಕ್ತ ಗೌರವ್ ಗುಪ್ತಾ ಅವರು ಮೇಯರ್ ಸ್ಥಾನಕ್ಕೆ ಶಾಂತಕುಮಾರಿ ಹಾಗೂ ಉಪ ಮೇಯರ್ ಸ್ಥಾನಕ್ಕೆ ರಂಗಣ್ಣ ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿ, ಚುನಾವಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದರು.
ಬಿಜೆಪಿ ಅವಧಿಯ ಕೊನೆ ಮೇಯರ್ ಇದಾಗಿರುವುದರಿಂದ ಮೇಯರ್ ಆಕಾಂಕ್ಷಿಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಹೀಗಾಗಿ ಪಕ್ಷದ ಮುಖಂಡರು ಇಂದು ಬೆಳಗ್ಗೆಯಿಂದಲೇ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿವಾಸದಲ್ಲಿ ಸಭೆ ಸೇರಿ ಮೇಯರ್ ಮತ್ತು ಉಪ ಮೇಯರ್ ಅಭ್ಯರ್ಥಿ ಆಯ್ಕೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಅಂತಿಮವಾಗಿ ಶಾಂತಕುಮಾರಿ ಹಾಗೂ ರಂಗಣ್ಣ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ವಿಧಾನ ಪರಿಷತ್ ಸದಸ್ಯ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
Click this button or press Ctrl+G to toggle between Kannada and English